ಬಂಧನ
(ಪ್ರಾತಿನಿಧಿಕ ಚಿತ್ರ)
ಪುಣೆ: ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೇಂಜರ್ಸ್ ಬೆಂಗಳೂರು ತಂಡವು ಕಪ್ ಗೆದ್ದಿದ್ದಕ್ಕೆ ಪಟಾಕಿ ಸಿಡಿಸಿ ವಿಜಯೋತ್ಸವ ಮಾಡಿದ ನಲವತ್ತಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿರುವ ಘಟನೆ ಪುಣೆಯಲ್ಲಿ ನಡೆದಿದೆ.
ಮಂಗಳವಾರ ರಾತ್ರಿ ಐಪಿಎಲ್ ಫೈನಲ್ ಫಲಿತಾಂಶದ ನಂತರ ಪುಣೆಯ ಡೆಕ್ಕನ್ ಪೊಲೀಸ್ ಠಾಣೆಯ ವ್ಯಾಪ್ತಿಯ ನಾಮಧಾರ್ ಗೋಪಾಲ ಕೃಷ್ಣ ಗೋಕಲೆ ಚೌಕ್ ಬಳಿ ಕೆಲವರು ಅನುಮತಿ ಪಡೆಯದೇ ವಿಜಯೋತ್ಸವ ಆಚರಿಸುತ್ತಿದ್ದರು ಎಂದು ಪೊಲೀಸರು ಆರೋಪಿಸಿದ್ದಾರೆ.
ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸಿದ್ದು, ಪಟಾಕಿ ಸಿಡಿಸಿ ಮಾಲಿನ್ಯಕ್ಕೆ ಕಾರಣವಾಗಿದ್ದು ಹಾಗೂ ಸಾರ್ವಜನಿಕ ಶಾಂತಿಗೆ ಭಂಗ ತಂದಿರುವ ಆರೋಪಗಳನ್ನು ಮಹಾರಾಷ್ಟ್ರ ಪೊಲೀಸ್ ಕಾಯ್ದೆ ಅಡಿ ಆರ್‌ಸಿಬಿ ಅಭಿಮಾನಿಗಳ ವಿರುದ್ಧ ಹೊರಿಸಲಾಗಿದೆ.
ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದ್ದು ಅನುಮತಿ ಪಡೆಯದೇ ವಿಜಯೋತ್ಸವ ಆಚರಿಸಿರುವ ಇನ್ನೂ ಹಲವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಜೂನ್ 3ರಂದು ನಡೆದಿದ್ದ ಐಪಿಎಲ್ ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ತಂಡವು, ಪಿಬಿಕೆಎಸ್ ವಿರುದ್ಧ ಆರು ರನ್‌ಗಳಿಂದ ಜಯಿಸಿ ಕಪ್ ಎತ್ತಿ ಹಿಡಿದಿತ್ತು. ಈ ಹಿನ್ನೆಲೆಯಲ್ಲಿ ಬುಧವಾರ ಬೆಂಗಳೂರಿನಲ್ಲಿ ನಡೆದಿದ್ದ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಸಂಭವಿಸಿ 11 ಜನ ಮೃತಪಟ್ಟಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.