
ಎಂ.ಎಸ್. ಧೋನಿ–ಕ್ವಿಂಟನ್ ಡಿ ಕಾಕ್
ಪಾಕಿಸ್ತಾನ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2–1ರಿಂದ ದಕ್ಷಿಣ ಆಫ್ರಿಕಾ ತಂಡ ಸೋತು ನಿರಾಸೆ ಅನುಭಿಸಿದೆ. ಆದರೆ, ನಿವೃತ್ತಿ ನಿರ್ಧಾರದಿಂದ ಹಿಂದೆ ಸರಿದು ದ.ಆಫ್ರಿಕಾ ತಂಡಕ್ಕೆ ಮರಳಿದ ವಿಕೆಟ್ ಕೀಪರ್ ಬ್ಯಾಟರ್ ಕ್ವಿಂಟನ್ ಡಿ ಕಾಕ್ ಏಕದಿನ ಕ್ರಿಕೆಟ್‌ನಲ್ಲಿ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿದ್ದ ದಾಖಲೆಯೊಂದನ್ನು ಸರಿಗಟ್ಟಿದ್ದಾರೆ.
ಎರಡು ವರ್ಷದ ಹಿಂದೆ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಹೊಂದುತ್ತಿರುವುದಾಗಿ ಘೋಷಿಸಿದ್ದ ಕ್ವಿಂಟನ್ ಡಿಕಾಕ್, ಪಾಕಿಸ್ತಾನ ಸರಣಿಗೂ ಮುನ್ನ ತಮ್ಮ ನಿರ್ಧಾರ ಹಿಂಪಡೆದಿದ್ದರು. ಮಾತ್ರವಲ್ಲ, ಪಾಕ್ ವಿರುದ್ಧದ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿದ ಅವರು, 119.50 ಸರಾಸರಿಯಲ್ಲಿ 239 ರನ್ ಬಾರಿಸುವ ಮೂಲಕ ಸರಣಿ ಶ್ರೇಷ್ಠ ಆಟಗಾರ ಪ್ರಶಸ್ತಿ ತಮ್ಮದಾಗಿಸಿಕೊಂಡರು.
ಈ ಪ್ರಶಸ್ತಿ ಗೆಲ್ಲುವ ಮೂಲಕ ಡಿ ಕಾಕ್ ಅವರು ವಿಕೆಟ್ ಕೀಪರ್ ಬ್ಯಾಟರ್ ಆಗಿ ಏಕದಿನ ಕ್ರಿಕೆಟ್‌ನಲ್ಲಿ ಅತೀ ಹೆಚ್ಚು ಸರಣಿ ಶ್ರೇಷ್ಠ ಪ್ರಶಸ್ತಿಗಳನ್ನು ಗೆದ್ದ ಧೋನಿಯವರ ವಿಶ್ವ ದಾಖಲೆ ಸರಿಗಟ್ಟಿದರು. ಧೋನಿಯವರು ಆಡಿರುವ 350 ಏಕದಿನ ಪಂದ್ಯಗಳಲ್ಲಿ ಅತೀ 7 ಬಾರಿ ಸರಣಿ ಶ್ರೇಷ್ಠ ಪ್ರಶಸ್ತಿಗಳನ್ನು ಗೆದ್ದಿದ್ದಾರೆ.
ಇದೀಗ ಕ್ವಿಂಟನ್ ಡಿ ಕಾಕ್ ಅವರು ಧೋನಿ ದಾಖಲೆಯನ್ನು ಸರಿಗಟ್ಟಿದ್ದು, ಅವರು ಕೂಡ ಪಾಕ್ ವಿರುದ್ಧದ ಸರಣಿಯ ಮೂಲಕ 7ನೇ ಸರಣಿ ಶ್ರೇಷ್ಠ ಪ್ರಶಸ್ತಿ ಗೆದ್ದ ಸಾಧನೆ ಮಾಡಿದರು. ಡಿಕಾಕ್ ಅವರು ಕೇವಲ 159 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದಾರೆ.
ಏಕದಿನ ಕ್ರಿಕೆಟ್‌ನಲ್ಲಿ ಅತೀ ಹೆಚ್ಚು ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದ ವಿಕೆಟ್ ಕೀಪರ್ ಬ್ಯಾಟರ್‌ಗಳು
ಕ್ವಿಂಟನ್ ಡಿಕಾಕ್–7
ಎಂ.ಎಸ್. ಧೋನಿ –7
ಮುಷ್ಫಿಕರ್ ರಹೀಮ್ –6
ಶೈ ಹೋಪ್–5
ಕುಮಾರ ಸಂಗಕ್ಕಾರ–5
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.