ಆರ್. ಅಶ್ವಿನ್
ದುಬೈ: ಭಾರತದ ಮಾಜಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಇಂಟರ್‌ನ್ಯಾಷನಲ್ ಲೀಗ್ ಟಿ–20 (ILT-20) ಹರಾಜಿನಲ್ಲಿ ಮಾರಾಟವಾಗದೆ ಉಳಿದಿದ್ದಾರೆ. ಅವರು ಯುಎಇ ಮೂಲದ ಅಂತರರಾಷ್ಟ್ರೀಯ ಮಟ್ಟದ ಲೀಗ್‌ನಲ್ಲಿ ಆಡಲು ಹೆಸರು ನೋಂದಾಯಿಸಿಕೊಂಡಿದ್ದರು.
ಆರ್.ಅಶ್ವಿನ್ 120,000 ಅಮೆರಿಕನ್ ಡಾಲರ್ ಮೂಲ ಬೆಲೆ ಹೊಂದಿದ್ದ ಏಕೈಕ ಆಟಗಾರರಾಗಿದ್ದರು. ಆದರೆ, ಅವರನ್ನು ಹರಾಜಿನ ಮೊದಲ ಸುತ್ತಿನಲ್ಲಿ ಯಾವುದೇ ಫ್ರಾಂಚೈಸಿ ಖರೀದಿಸಲು ಮುಂದೆ ಬರಲಿಲ್ಲ. ಆದರೆ, ಅವರು ವೈಲ್ಡ್‌ಕಾರ್ಡ್ ಮೂಲಕ ಸ್ಥಾನ ಪಡೆಯುವ ಅವಕಾಶ ಹೊಂದಿದ್ದಾರೆ.
ಆರ್.ಅಶ್ವಿನ್ ಅವರು ಇಂಡಿಯನ್ ಪ್ರೀಮಿಯರ್ ಲೀಗ್‌ನಿಂದ ನಿವೃತ್ತಿ ಪಡೆದ ಬಳಿಕ ಯುಎಇ ಮೂಲದ ಲೀಗ್‌ನಲ್ಲಿ ಆಡಲು ಹೆಸರು ನೋಂದಾಯಿಸಿಕೊಂಡಿದ್ದರು. ಐಪಿಎಲ್ ಹಾಗೂ ಭಾರತ ತಂಡದಿಂದ ನಿವೃತ್ತಿ ಘೋಷಣೆ ಮಾಡಿರುವುದು ಅವರನ್ನು ವಿದೇಶಿ ಟೂರ್ನಿಯಲ್ಲಿ ಭಾಗವಹಿಸುವಂತೆ ಮಾಡಿದೆ.
39 ವರ್ಷದ ಅವರು ಕಳೆದ ವಾರ ಬಿಗ್ ಬ್ಯಾಷ್ ಲೀಗ್‌ನಲ್ಲಿ ಸಿಡ್ನಿ ಥಂಡರ್ ಪರ ಆಡಲು ಒಪ್ಪಂದಕ್ಕೆ ಸಹಿ ಮಾಡಿದ್ದಾರೆ. ಆ ಮೂಲಕ ಈ ಟೂರ್ನಿಯಲ್ಲಿ ಕಾಣಿಸಿಕೊಂಡ ಭಾರತದ ಮೊದಲ ಪ್ರಮುಖ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.