ADVERTISEMENT

ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಿ: ಅಜಿಂಕ್ಯ ರಹಾನೆ 

ಪಿಟಿಐ
Published 3 ಏಪ್ರಿಲ್ 2020, 19:45 IST
Last Updated 3 ಏಪ್ರಿಲ್ 2020, 19:45 IST
ಅಜಿಂಕ್ಯ ರಹಾನೆ 
ಅಜಿಂಕ್ಯ ರಹಾನೆ    

ಮುಂಬೈ: ‘ಲಾಕ್‌ಡೌನ್‌ ಅವಧಿಯಲ್ಲಿ ಎಲ್ಲರೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವತ್ತ ಚಿತ್ತ ಹರಿಸಬೇಕು’ ಎಂದು ಭಾರತ ಕ್ರಿಕೆಟ್‌ ತಂಡದ ಆಟಗಾರ ಅಜಿಂಕ್ಯ ರಹಾನೆ, ಶುಕ್ರವಾರ ಸಲಹೆ ನೀಡಿದ್ದಾರೆ.

‘ಲಾಕ್‌ಡೌನ್‌ ಸಮಯದಲ್ಲಿ ಅನೇಕರು ಒತ್ತಡ ಹಾಗೂ ಖಿನ್ನತೆಗೆ ಒಳಗಾಗುತ್ತಿದ್ದಾರೆ. ಇದನ್ನು ತಡೆಯುವ ಹಾಗೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ ಎಂಬುದರ ಕುರಿತು ಅಗತ್ಯ ಸಲಹೆ ನೀಡುವ ಸಲುವಾಗಿ ಮಹಾರಾಷ್ಟ್ರ ಸರ್ಕಾರವು ಉಚಿತ ಹೆಲ್ಪ್‌ ಲೈನ್‌ ಆರಂಭಿಸಿದೆ. ಎಲ್ಲರೂ ಇದರ ಪ್ರಯೋಜನ ಪಡೆದುಕೊಳ್ಳಬೇಕು’ ಎಂದು ರಹಾನೆ ಟ್ವೀಟ್‌ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT