ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಚಾಂಪಿಯನ್ ಬ್ಯಾಟರ್ ವಿರಾಟ್ ಕೊಹ್ಲಿ ಅವರಿಗೆ ಭಾರತರತ್ನ ನೀಡಬೇಕು ಎಂದು ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಅಭಿಪ್ರಾಯಪಟ್ಟಿದ್ದಾರೆ.
ವಿರಾಟ್ ಅವರು ಈಚೆಗಷ್ಟೇ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದರು. ಹೋದ ವರ್ಷ ಟಿ20 ಮಾದರಿಯಿಂದಲೂ ನಿವೃತ್ತಿ ಪಡೆದಿದ್ದರು.
‘ವಿರಾಟ್ ಅವರು ಹಲವಾರು ಅಮೋಘ ಸಾಧನೆಗಳನ್ನು ಮಾಡಿದ್ದಾರೆ. ಅವರು ಕ್ರಿಕೆಟ್ ಕ್ಷೇತ್ರಕ್ಕೆ ನೀಡಿರುವ ಕಾಣಿಕೆಗಳನ್ನು ಪರಿಗಣಿಸಬೇಕು. ಭಾರತ ಸರ್ಕಾರವು ದೇಶದ ಅತ್ಯುನ್ನತ ಗೌರವವಾದ ಭಾರತರತ್ನವನ್ನು ಕೊಹ್ಲಿಗೆ ನೀಡಬೇಕು’ ಎಂದು ರೈನಾ ಅವರು ಸ್ಟಾರ್ ಸ್ಪೋರ್ಟ್ಸ್ ವಾಹಿನಿಯ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.