ಅಬುಧಾಬಿ: ಮುಂಬೈ ಇಂಡಿಯನ್ಸ್ ವಿರುದ್ಧ ಸೋಲು ಅನುಭವಿಸಿದ ರಾಜಸ್ಥಾನ ರಾಯಲ್ಸ್ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ. ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸ್ಟೀವ್ ಸ್ಮಿತ್ ₹12 ಲಕ್ಷ ದಂಡಕ್ಕೆ ಗುರಿಯಾಗಿದ್ದಾರೆ.
ಅಬುಧಾಬಿಯಲ್ಲಿ ಮಂಗಳವಾರ ನಡೆದ ಐಪಿಎಲ್-2020 ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ನಿಧಾನಗತಿ ಬೌಲಿಂಗ್ ಮಾಡಿರುವುದು ನೀತಿ ಸಂಹಿತೆ ಉಲ್ಲಂಘನೆಗೆ ಕಾರಣವಾಗಿದೆ. ಆ ಹಿನ್ನೆಲೆಯಲ್ಲಿ ₹12 ಲಕ್ಷ ದಂಡ ತೆರಬೇಕೆಂದು ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸ್ಟೀವ್ ಸ್ಮಿತ್ ಅವರಿಗೆ ಐಪಿಎಲ್ ಆಡಳಿತವು ಆದೇಶಿಸಿದೆ.
ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡ ಪರಾಭವಗೊಂಡಿತು. ಮುಂಬೈ ಇಂಡಿಯನ್ಸ್‌ನ 194 ರನ್‌ಗಳ ಗುರಿ ಬೆನ್ನತ್ತಿದ ರಾಜಸ್ಥಾನ ರಾಯಲ್ಸ್ ತಂಡ ಕೇವಲ 136 ರನ್‌ಗಳಿಗೆ ಆಲೌಟ್ ಆಯಿತು.
ಇದನ್ನೂ ಓದಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.