ADVERTISEMENT

ರಾಜೀವ್ ಶುಕ್ಲಾ ಬಿಸಿಸಿಐ ಮುಂದಿನ ಅಧ್ಯಕ್ಷ?

ಪಿಟಿಐ
Published 2 ಜೂನ್ 2025, 8:45 IST
Last Updated 2 ಜೂನ್ 2025, 8:45 IST
ಜಯ್ ಶಾ, ರೋಜರ್ ಬಿನ್ನಿ ಮತ್ತು ರಾಜೀವ್ ಶುಕ್ಲಾ 
ಜಯ್ ಶಾ, ರೋಜರ್ ಬಿನ್ನಿ ಮತ್ತು ರಾಜೀವ್ ಶುಕ್ಲಾ    

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ರೋಜರ್ ಬಿನ್ನಿ ಅವರು ಮುಂದಿನ ತಿಂಗಳು ನಿವೃತ್ತಿಯಾಗಲಿದ್ದು ಆ ಸ್ಥಾನಕ್ಕೆ ರಾಜೀವ್ ಶುಕ್ಲಾ ಅವರು ನೇಮಕಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ರಾಜೀವ್ ಶುಕ್ಲಾ ಅವರು ಪ್ರಸ್ತುತ ಬಿಸಿಸಿಐ ಉಪಾಧ್ಯಕ್ಷರಾಗಿದ್ದಾರೆ.

ಸೌರವ್ ಗಂಗೂಲಿ ತರುವಾಯ ಬಿಸಿಸಿಐ ಅಧ್ಯಕ್ಷರಾಗಿದ್ದ ಆಂಗ್ಲೊ ಇಂಡಿಯನ್ ಹಾಗೂ ಮಾಜಿ ಕ್ರಿಕೆಟಿಗ ರೋಜರ್ ಬಿನ್ನಿ ಅವರು ಜುಲೈ 19ರಂದು 70 ವರ್ಷ ಪೂರೈಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಹೊಸ ನೇಮಕ ಮಾಡುತ್ತಿದ್ದಾರೆ.

ADVERTISEMENT

ಬಿಸಿಸಿಐ ವಿಶ್ವದ ಶ್ರೀಮಂತ ಕ್ರಿಕೆಟ್ ಸಂಸ್ಥೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.