ಬೆಂಗಳೂರು: ನವಪ್ರತಿಭೆಗಳಾದ ನಿಕಿನ್ ಜೋಸ್ ಮತ್ತು ವಿಶಾಲ್ ಓನತ್ ಅವರಿಗೆ ಈ ಬಾರಿಯ ರಣಜಿ ಟ್ರೋಫಿ ಟೂರ್ನಿಯಲ್ಲಿ ಆಡಲಿರುವ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಮಯಂಕ್ ಅಗರವಾಲ್ ನಾಯಕತ್ವದ 15 ಆಟಗಾರರ ತಂಡವನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯು ಶನಿವಾರ ಪ್ರಕಟಿಸಿದೆ. ಈಚೆಗೆ ನಡೆದ ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಪದಾರ್ಪಣೆ ಮಾಡಿದ್ದ ನಿಕಿನ್ ಜೋಸ್ ಉತ್ತಮವಾಗಿ ಆಡಿದ್ದರು. ಬಲಗೈ ಬ್ಯಾಟರ್ ವಿಶಾಲ್ ಓನತ್ 19 ವರ್ಷದೊಳಗಿನವರ ವಿಭಾಗದಲ್ಲಿ ರನ್‌ಗಳ ಹೊಳೆ ಹರಿಸಿದ್ದರು.
ಆದರೆ ಸಂಭವನೀಯರ ಪಟ್ಟಿಯಲ್ಲಿದ್ದ ಅನುಭವಿ ಆಟಗಾರ ಕರುಣ್ ನಾಯರ್ ಅವರನ್ನು ಈ ಪಟ್ಟಿಯಿಂದ ಕೈಬಿಡಲಾಗಿದೆ.
ತಂಡ:ಮಯಂಕ್ ಅಗರವಾಲ್ (ನಾಯಕ), ಆರ್. ಸಮರ್ಥ್ (ಉಪನಾಯಕ), ನಿಕಿನ್ ಜೋಸ್, ವಿಶಾಲ್ ಓನತ್, ಮನೀಷ್ ಪಾಂಡೆ, ಕೆ.ವಿ. ಸಿದ್ಧಾರ್ಥ್, ಬಿ.ಆರ್. ಶರತ್, ಶರತ್ ಶ್ರೀನಿವಾಸ್ (ಇಬ್ಬರೂ ವಿಕೆಟ್‌ಕೀಪರ್), ಕೆ. ಗೌತಮ್, ಶ್ರೇಯಸ್ ಗೋಪಾಲ್, ರೋನಿತ್ ಮೋರೆ, ವಿ. ಕೌಶಿಕ್, ವಿದ್ವತ್ ಕಾವೇರಪ್ಪ, ವಿ. ವೈಶಾಖ, ಶುಭಾಂಗ್ ಹೆಗ್ಡೆ. ಪಿ.ವಿ. ಶಶಿಕಾಂತ್ (ಕೋಚ್), ದೀಪಕ್ ಚೌಗುಲೆ (ಫೀಲ್ಡಿಂಗ್ ಕೋಚ್), ಜಾಬ ಪ್ರಭು (ಫಿಸಿಯೊ), ಕೆ.ಸಿ. ಅವಿನಾಶ್ (ಸ್ಟ್ರೆಂಥ್–ಕಂಡಿಷನಿಂಗ್), ಎ. ರಮೇಶ್ ರಾವ್ (ಮ್ಯಾನೇಜರ್), ಸಿ.ಎಂ. ಸೋಮಸುಂದರ್ (ಮಸಾಜ್ ತಜ್ಞ), ರಾಜ್ ಕೀರ್ತಿ ಕಪಾಡಿಯಾ (ವಿಡಿಯೊ ಅನಾಲಿಸ್ಟ್).
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.