ADVERTISEMENT

Ranji Trophy: 12 ವರ್ಷಗಳ ಬಳಿಕ ಅಭ್ಯಾಸಕ್ಕಿಳಿದ ಕಿಂಗ್ ಕೊಹ್ಲಿ

ಪಿಟಿಐ
Published 28 ಜನವರಿ 2025, 6:26 IST
Last Updated 28 ಜನವರಿ 2025, 6:26 IST
<div class="paragraphs"><p>ವಿರಾಟ್ ಕೊಹ್ಲಿ</p></div>

ವಿರಾಟ್ ಕೊಹ್ಲಿ

   

(ಪಿಟಿಐ ಚಿತ್ರ)

ನವದೆಹಲಿ: ಬರೋಬ್ಬರಿ 12 ವರ್ಷಗಳ ಬಳಿಕ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ, ರಣಜಿ ಟ್ರೋಫಿ ದೇಶೀಯ ಟೂರ್ನಿಯಲ್ಲಿ ಆಡಲು ಅಭ್ಯಾಸ ನಡೆಸಿದ್ದಾರೆ.

ADVERTISEMENT

ವಿರಾಟ್ ಕೊಹ್ಲಿ ಇಂದು (ಮಂಗಳವಾರ) ಡೆಲ್ಲಿ ತಂಡದೊಂದಿಗೆ ಅಭ್ಯಾಸದಲ್ಲಿ ಕಾಣಿಸಿಕೊಂಡಿದ್ದಾರೆ. ಆ ಮೂಲಕ 2012ರ ಬಳಿಕ ಮೊದಲ ಬಾರಿ ರಣಜಿ ಟ್ರೋಫಿಯಲ್ಲಿ ಆಡಲು ಸಜ್ಜಾಗಿದ್ದಾರೆ. 2012ರಲ್ಲಿ ಉತ್ತರ ಪ್ರದೇಶದ ವಿರುದ್ಧ ಕೊಹ್ಲಿ ಕೊನೆಯದಾಗಿ ರಣಜಿ ಪಂದ್ಯ ಆಡಿದ್ದರು.

ಬೆಳಿಗ್ಗೆ 9 ಗಂಟೆ ಸುಮಾರಿಗೆ ಮೈದಾನಕ್ಕೆ ಆಗಮಿಸಿದ ಕೊಹ್ಲಿ ಮೊದಲು ಸಹ ಆಟಗಾರರೊಂದಿಗೆ 15 ನಿಮಿಷಗಳ ಕಾಲ ಫುಟ್‌ಬಾಲ್ ಆಡಿದರು. ಈ ಸಂದರ್ಭದಲ್ಲಿ ಡೆಲ್ಲಿ ತಂಡದ ಮುಖ್ಯ ಕೋಚ್ ಸರನ್‌ದೀಪ್ ಸಿಂಗ್ ಇದ್ದರು. ಕೊಹ್ಲಿ ಎಂದಿನಂತೆ ನಿರಾಳರಾಗಿ ಕಂಡುಬಂದರು.

ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಜ.30ರಂದು (ಗುರುವಾರ) ರೈಲ್ವೇಸ್‌ ವಿರುದ್ಧ ಆರಂಭವಾಗಲಿರುವ ಪಂದ್ಯದಲ್ಲಿ ಡೆಲ್ಲಿ ತಂಡವನ್ನು ಕೊಹ್ಲಿ ಪ್ರತಿನಿಧಿಸಲಿದ್ದಾರೆ. ಆ ಮೂಲಕ ಬ್ಯಾಟಿಂಗ್ ಲಯಕ್ಕೆ ಮರಳುವ ನಿರೀಕ್ಷೆಯಲ್ಲಿದ್ದಾರೆ.

ಡೆಲ್ಲಿ ತಂಡವನ್ನು ಆಯುಷ್ ಬಡೋನಿ ಮುನ್ನಡೆಸಲಿದ್ದಾರೆ.

ಇತ್ತೀಚೆಗೆ ಆಸ್ಟ್ರೇಲಿಯಾದಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟೂರ್ನಿಯಲ್ಲಿ ಬ್ಯಾಟರ್‌ಗಳ ಸತತ ವೈಫಲ್ಯ ಹಾಗೂ ಸರಣಿ ಸೋಲಿನ ಬೆನ್ನಲ್ಲೇ ಆಟಗಾರರು ದೇಶೀಯ ಟೂರ್ನಿಯಾದ ರಣಜಿ ಟ್ರೋಫಿಯಲ್ಲಿ ಆಡುವುದನ್ನು ಬಿಸಿಸಿಐ ಕಡ್ಡಾಯಗೊಳಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.