ADVERTISEMENT

ವಿಂಡೀಸ್ ಎದುರಿನ ಸರಣಿಗೆ ತಂಡ: ರವಿ ಬಿಷ್ಣೋಯಿಗೆ ಸ್ಥಾನ; ಮರಳಿದ ಕುಲದೀಪ್

ಪಿಟಿಐ
Published 27 ಜನವರಿ 2022, 1:22 IST
Last Updated 27 ಜನವರಿ 2022, 1:22 IST
ರವಿ ಬಿಷ್ಣೋಯಿ
ರವಿ ಬಿಷ್ಣೋಯಿ   

ನವದೆಹಲಿ: ಯುವ ಲೆಗ್‌ಸ್ಪಿನ್ನರ್ ರವಿ ಬಿಷ್ಣೋಯಿ ವೆಸ್ಟ್ ಇಂಡೀಸ್ ಎದುರಿನ ಸೀಮಿತ ಓವರ್‌ಗಳ ಕ್ರಿಕೆಟ್ ಸರಣಿಯಲ್ಲಿ ಆಡಲಿರುವ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಚೈನಾಮನ್ ಬೌಲರ್ ಕುಲದೀಪ್ ಯಾದವ್ ತಂಡಕ್ಕೆ ಮರಳಿದ್ದಾರೆ.

ಬುಧವಾರ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು ಏಕದಿನ ಮತ್ತು ಟಿ20 ಸರಣಿಗಳಲ್ಲಿ ಆಡುವ ತಂಡಗಳನ್ನು ಪ್ರಕಟಿಸಿದೆ. ಗಾಯದಿಂದ ಚೇತರಿಸಿಕೊಂಡು, ಫಿಟ್‌ನೆಸ್ ಪರೀ ಕ್ಷೆಯಲ್ಲಿ ಉತ್ತೀರ್ಣರಾಗಿರುವ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ. ನಿಕಟಪೂರ್ವ ನಾಯಕ ವಿರಾಟ್ ಕೊಹ್ಲಿ ಕೂಡ ಲಭ್ಯರಿದ್ದಾರೆ. ತವರಿನ ಸರಣಿಯಲ್ಲಿ ಯುವ ಆಟಗಾರರಿಗೆ ಹೆಚ್ಚು ಪ್ರಾಶಸ್ತ್ಯ ನೀಡಲಾಗಿದೆ.

ಋತುರಾಜ್ ಗಾಯಕವಾಡ್, ವೆಂಕಟೇಶ್ ಅಅಯ್ಯರ್, ಆವೇಶ್ ಖಾನ್,ದೀಪಕ್ ಹೂಡಾ ಮತ್ತು ಹರ್ಷಲ್ ಪಟೇಲ್ ಅವರು ಸ್ಥಾನ ಪಡೆದಿದ್ದಾರೆ. ಕರ್ನಾಟಕದ ಬೌಲರ್ ಪ್ರಸಿದ್ಧಕೃಷ್ಣ ಏಕದಿನ ತಂಡದಲ್ಲಿ ಅವಕಾಶ ಗಳಿಸಿದ್ದಾರೆ. ಮೊಣಕಾಲಿನ ಶಸ್ತ್ರಚಿಕಿತ್ಸೆಯಿಂದಾಗಿ ಕುಲದೀಪ್ ಕೆಲವು ತಿಂಗಳುಗಳಿಂದ ಕಣಕ್ಕಿಳಿದಿರಲಿಲ್ಲ. .

ಏಕದಿನ ಕ್ರಿಕೆಟ್ ತಂಡ: ರೋಹಿತ್ ಶರ್ಮಾ (ನಾಯಕ), ಕೆ.ಎಲ್. ರಾಹುಲ್ (ಉಪನಾಯಕ), ಋತುರಾಜ್ ಗಾಯಕವಾಡ್, ಶಿಖರ್ ಧವನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್‌ಕೀಪರ್), ದೀಪಕ್ ಚಾಹರ್, ಶಾರ್ದೂಲ್ ಠಾಕೂರ್, ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯಿ, ಮೊಹಮ್ಮದ್ ಸಿರಾಜ್, ಪ್ರಸಿದ್ಧ ಕೃಷ್ಣ, ಆವೇಶ್ ಖಾನ್.

ಟಿ20 ತಂಡ: ‌ರೋಹಿತ್ ಶರ್ಮಾ (ನಾಯಕ), ಕೆ.ಎಲ್. ರಾಹುಲ್ (ಉಪನಾಯಕ), ಇಶಾನ್ ಕಿಶನ್, ರವಿ ಬಿಷ್ಣೋಯಿ, ವೆಂಕಟೇಶ್ ಅಯ್ಯರ್, ಹರ್ಷಲ್ ಪಟೇಲ್, ರಿಷಭ್ ಪಂತ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ದೀಪಕ್ ಚಾಹರ್, ಶಾರ್ದೂಲ್ ಠಾಕೂರ್, ಯಜುವೇಂದ್ರ ಚಾಹಲ್, ಆವೇಶ್ ಖಾನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.