ಆರ್. ಅಶ್ವಿನ್
ಮುಂಬೈ: ಭಾರತ ಕ್ರಿಕೆಟ್ ತಂಡದ ಮಾಜಿ ಆಲ್‌ರೌಂಡರ್ ರವಿಚಂದ್ರನ್ ಅಶ್ವಿನ್ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ಗೆ ನಿವೃತ್ತಿ ಘೋಷಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, 'ಪ್ರತಿಯೊಂದು ಅಂತ್ಯವೂ ಹೊಸ ಆರಂಭವನ್ನು ಹೊಂದಿರುತ್ತದೆ. ಐಪಿಎಲ್ ಕ್ರಿಕೆಟಿಗನಾಗಿ ನನ್ನ ಅವಧಿ ಮುಗಿದಿದೆ' ಎಂದು ಬರೆದುಕೊಂಡಿದ್ದಾರೆ.
'ಉತ್ತಮ ಸಂಬಂಧ, ಅದ್ಭುತ ನೆನಪುಗಳನ್ನು ನೀಡಿದ್ದಕ್ಕೆ ಎಲ್ಲಾ ಫ್ರಾಂಚೈಸಿಗಳಿಗೆ ಹಾಗೂ, ಇಲ್ಲಿಯವರೆಗೆ ಅವಕಾಶ ನೀಡಿದ್ದಕ್ಕೆ ಐಪಿಎಲ್ ಹಾಗೂ ಬಿಸಿಸಿಐಗೆ ಧನ್ಯವಾದ ಹೇಳುತ್ತೇನೆ' ಎಂದಿದ್ದಾರೆ.
2009ರಲ್ಲಿ ಚೈನ್ನೈ ಸೂಪರ್ ಕಿಂಗ್ಸ್ ಮೂಲಕ ಅಶ್ವಿನ್, ಐಪಿಎಲ್‌ಗೆ ಪದಾರ್ಪಣೆ ಮಾಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.