ADVERTISEMENT

IPL 2025 | PBKS vs RCB: ಪಂಜಾಬ್ ಮಣಿಸಿ ಫೈನಲ್‌ಗೆ ಲಗ್ಗೆಯಿಟ್ಟ ಆರ್‌ಸಿಬಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 29 ಮೇ 2025, 17:14 IST
Last Updated 29 ಮೇ 2025, 17:14 IST
   

ಮುಲ್ಲನಪುರ, ಚಂಡೀಗಡ: ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ತಂಡವು ಎಂಟು ವರ್ಷಗಳ ನಂತರ ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯ ಫೈನಲ್‌ಗೆ ಲಗ್ಗೆ ಇಟ್ಟಿತು.

ಇಂದು (ಗುರುವಾರ) ಚಂಡೀಗಡದ ಮುಲ್ಲನಪುರದಲ್ಲಿ ನಡೆದ ಮೊದಲ ಕ್ವಾಲಿಫೈಯರ್‌ನಲ್ಲಿ ಆರ್‌ಸಿಬಿ 8 ವಿಕೆಟ್‌ಗಳಿಂದ ಪಂಜಾಬ್ ಕಿಂಗ್ಸ್ ಎದುರು ಜಯಿಸಿತು. ಫಿಲ್ ಸಾಲ್ಟ್ 27 ಎಸೆತಗಳಲ್ಲಿ 56 ರನ್ ಗಳಿಸಿ ತಂಡದ ಗೆಲುವಿನ ರೂವಾರಿ ಎನಿಸಿಕೊಂಡರು.

ಟಾಸ್‌ ಸೋತು ಬ್ಯಾಟಿಂಗ್‌ ಮಾಡಿದ ಪಂಜಾಬ್ ಕಿಂಗ್ಸ್, ಆರ್‌ಸಿಬಿಯ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿತು. 14.1 ಓವರ್‌ಗಳಲ್ಲಿ ಕೇವಲ 101 ರನ್‌ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನತ್ತಿದ, ಆರ್‌ಸಿಬಿ 8 ವಿಕೆಟ್‌ಗಳ ಅಂತರದಿಂದ ಭರ್ಜರಿ ಗೆಲವು ಸಾಧಿಸಿತು. ಈ ಮೂಲಕ ನಾಲ್ಕನೇ ಬಾರಿಗೆ ಫೈನಲ್‌ಗೆ ತಲುಪಿದೆ.

ADVERTISEMENT

ಈ ಸೋಲಿನ ಹೊರತಾಗಿಯೂ ಪಂಜಾಬ್‌ಗೆ ಮಗದೊಂದು ಅವಕಾಶ ಇರಲಿದ್ದು, ಭಾನುವಾರ ಅಹಮದಾಬಾದ್‌ನಲ್ಲಿ ನಡೆಯಲಿರುವ 2ನೇ ಕ್ವಾಲಿಫೈಯರ್‌ ಪಂದ್ಯದಲ್ಲಿ ಎಲಿಮಿನೇಟರ್ ವಿಜೇತ ತಂಡದ ಸವಾಲನ್ನು ಎದುರಿಸಲಿದೆ.

ನಾಳೆ ಚಂಡೀಗಢದಲ್ಲಿಯೇ ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಮುಂಬೈ ಇಂಡಿಯನ್ಸ್ ಮುಖಾ-ಮುಖಿಯಾಗಲಿವೆ.

ಫೈನಲ್ ಪಂದ್ಯವು ಜೂನ್ 3 ರಂದು ಅಹಮದಾಬಾದ್ ನಲ್ಲಿ ನಡೆಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.