ಆರ್‌ಸಿಬಿ ವಿಜಯೋತ್ಸವ
ಪಿಟಿಐ ಚಿತ್ರ
ಬೆಂಗಳೂರು: ಆರ್‌ಸಿಬಿ ವಿಜಯೋತ್ಸವದ ವೇಳೆ ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಬ್ರಿಟನ್ ಮಾಜಿ ಪ್ರಧಾನಿ ರಿಷಿ ಸುನಕ್ ವಿಷಾದ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಮುರ್ಮು ಅವರು, ‘ಬೆಂಗಳೂರಿನ ಕ್ರೀಡಾಂಗಣದಲ್ಲಿ ನಡೆದ ದುರಂತಲ್ಲಾದ ಜೀವಹಾನಿ ಆಘಾತಕಾರಿ ಮತ್ತು ಹೃದಯವಿದ್ರಾವಕವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ.
ಅಹಮದಾಬಾದ್‌ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾಗಿಯಾಗಿದ್ದ ಬ್ರಿಟನ್ ಮಾಜಿ ಪ್ರಧಾನಿ ರಿಷಿ ಸುನಕ್ ಬೆಂಗಳೂರಿನಲ್ಲಿ ನಡೆದ ದುರಂತಕ್ಕೆ ಶೋಕ ವ್ಯಕ್ತಪಡಿಸಿದ್ದಾರೆ. ‘ಬೆಂಗಳೂರಿನ ದುರಂತದಲ್ಲಿ ಮೃತರಾದವರ ಸಂಬಂಧಿಗಳು ಮತ್ತು ಗಾಯಗೊಂಡವರ ನೋವಿನಲ್ಲಿ ನಾನು ಮತ್ತು ಅಕ್ಷತಾ ಭಾಗಿಯಾಗಿದ್ದೇವೆ. ನಾವು ನಿಮ್ಮೊಂದಿಗೆ ಸಂಭ್ರಮಾಚಾರಣೆ ಮಾಡಿದ್ದೆವು; ಆದರೆ, ಈಗ ಶೋಕಾಚರಣೆ ಮಾಡುತ್ತಿದ್ದೇವೆ’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.