ADVERTISEMENT

Bengaluru Stampede | ಕಾಲ್ತುಳಿತ ದುರಂತ‌; ಹೃದಯ ಒಡೆದಿದೆ: ವಿರಾಟ್‌ ಕೊಹ್ಲಿ

ಪಿಟಿಐ
Published 5 ಜೂನ್ 2025, 2:32 IST
Last Updated 5 ಜೂನ್ 2025, 2:32 IST
<div class="paragraphs"><p>ಚಿನ್ನಸ್ವಾಮಿ ಮೈದಾನದಲ್ಲಿ ಸೇರಿದ ಜನರು</p></div>

ಚಿನ್ನಸ್ವಾಮಿ ಮೈದಾನದಲ್ಲಿ ಸೇರಿದ ಜನರು

   

ಪಿಟಿಐ ಚಿತ್ರ

ಬೆಂಗಳೂರು: 18 ವರ್ಷಗಳ ಬಳಿಕ ಚೊಚ್ಚಲ ಟ್ರೋಫಿ ಗೆದ್ದ ಆರ್‌ಸಿಬಿ ತಂಡದ ವಿಜಯೋತ್ಸವದ ವೇಳೆ ಕಾಲ್ತುಳಿತ ಸಂಭವಿಸಿ 11 ಅಭಿಮಾನಿಗಳು ಮೃತಪಟ್ಟಿದ್ದು, 50ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ADVERTISEMENT

ಸಂಭ್ರಮದ ಹೊನಲು ಸೂತಕದ ಛಾಯೆಯಾಗಿ ಬದಲಾಗಿತ್ತು. ಈ ದುರಂತಕ್ಕೆ ರಾಜ್ಯ ಮಾತ್ರವಲ್ಲದೆ ದೇಶದಾದ್ಯಂತ ಸಂತಾಪ ವ್ಯಕ್ತವಾಗಿದೆ. 

ಈ ದುರಂತಕ್ಕೆ ಪ್ರತಿಕ್ರಿಯಿಸಿರುವ ಆರ್‌ಸಿಬಿಯ ಸ್ಟಾರ್‌ ಆಟಗಾರ ವಿರಾಟ್‌ ಕೊಹ್ಲಿ, ‘ಮಾತೇ ಹೊರಡದಂತಾಗಿದೆ.. ಹೃದಯ ಒಡೆದಿದೆ..’ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. 

ಈ ಘಟನೆಯ ಕುರಿತು ಆರ್‌ಸಿಬಿ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ‘ಇಂದು (ಬುಧವಾರ) ಮಧ್ಯಾಹ್ನ ಆರ್‌ಸಿಬಿ ತಂಡದ ಆಗಮನದ ನಿರೀಕ್ಷೆಯಲ್ಲಿ ಬೆಂಗಳೂರಿನಾದ್ಯಂತ ಸಾರ್ವಜನಿಕ ಸಭೆಗಳ ಕುರಿತು ಮಾಧ್ಯಮ ವರದಿಗಳ ಮೂಲಕ ಬೆಳಕಿಗೆ ಬಂದಿರುವ ದುರದೃಷ್ಟಕರ ಘಟನೆಗಳಿಂದ ನಾವು ತೀವ್ರ ದುಃಖಿತರಾಗಿದ್ದೇವೆ. ಪ್ರತಿಯೊಬ್ಬರ ಸುರಕ್ಷತೆ ಮತ್ತು ಯೋಗಕ್ಷೇಮ ನಮಗೆ ಅತ್ಯಂತ ಮುಖ್ಯವಾಗಿದೆ. ದುರಂತದಲ್ಲಾದ ಜೀವಹಾನಿಗೆ ಆರ್‌ಸಿಬಿ ಶೋಕ ವ್ಯಕ್ತಪಡಿಸುತ್ತದೆ. ಸಂತ್ರಸ್ತ ಕುಟುಂಬಗಳಿಗೆ ನಮ್ಮ ಸಂತಾಪವನ್ನು ವ್ಯಕ್ತಪಡಿಸುತ್ತದೆ. ಪರಿಸ್ಥಿತಿಯ ಬಗ್ಗೆ ತಿಳಿದ ತಕ್ಷಣ, ನಾವು ನಮ್ಮ ಕಾರ್ಯಕ್ರಮವನ್ನು ಕೂಡಲೇ ತಿದ್ದುಪಡಿ ಮಾಡಿ ಸ್ಥಳೀಯ ಆಡಳಿತದ ಮಾರ್ಗದರ್ಶನ ಮತ್ತು ಸಲಹೆಯನ್ನು ಪಾಲಿಸಿದ್ದೇವೆ’ ಎಂದು ಹೇಳಿದೆ.

₹5 ಲಕ್ಷ ಪರಿಹಾರ ಘೋಷಿಸಿದ ಆರ್‌ಸಿಬಿ– ಕೆಎಸ್‌ಸಿಎ

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಐಪಿಎಲ್‌ ಚಾಂಪಿಯನ್‌ ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಉಂಟಾದ ನೂಕು ನುಗ್ಗಲಿನಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರ ನೀಡುವುದಾಗಿ ಆರ್‌ಸಿಬಿ– ಕೆಎಸ್‌ಸಿಎ ಬುಧವಾರ ರಾತ್ರಿ ಪ್ರಕಟಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.