ADVERTISEMENT

Instagram | 2 ಕೋಟಿ ಹಿಂಬಾಲಕರು; ದಾಖಲೆ ಬರೆದ ಆರ್‌ಸಿಬಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ಮೇ 2025, 5:19 IST
Last Updated 27 ಮೇ 2025, 5:19 IST
   

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಚೊಚ್ಚಲ ಟ್ರೋಫಿಯ ಹುಡುಕಾಟದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮೈದಾನದ ಆಚೆ ಮಗದೊಂದು ದಾಖಲೆ ಬರೆದಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಇನ್‌ಸ್ಟಾಗ್ರಾಂ ಖಾತೆಯಲ್ಲಿ 2 ಕೋಟಿ ಹಿಂಬಾಲಕರನ್ನು ಹೊಂದಿದೆ.

ಈ ಖುಷಿ ಸುದ್ದಿಯನ್ನು ಆರ್‌ಸಿಬಿ ಹಂಚಿಕೊಂಡಿದ್ದು, ಅಭಿಮಾನಿಗಳಿಗೆ ಧನ್ಯವಾದಗಳನ್ನು ಸಲ್ಲಿಸಿದೆ.

ADVERTISEMENT

ಹಾಗೆಯೇ ಎರಡು ಕೋಟಿ ಹಿಂಬಾಲಕರನ್ನು ಹೊಂದಿದ ಐಪಿಎಲ್‌ನ ಮೊದಲ ತಂಡ ಎಂಬ ಕೀರ್ತಿಗೆ ಭಾಜನವಾಗಿದೆ. ಆ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ಅಂತಹ ತಂಡಗಳನ್ನು ಹಿಂದಿಕ್ಕಿದೆ.

ಐಪಿಎಲ್‌ನ ಅತ್ಯಂತ ಜನಪ್ರಿಯ ತಂಡಗಳಲ್ಲಿ ಆರ್‌ಸಿಬಿ ಕೂಡ ಒಂದಾಗಿದೆ. ಆರ್‌ಸಿಬಿ ಇದುವರೆಗೆ ಕಪ್ ಗೆಲ್ಲದೇ ಇರಬಹುದು. ಆದರೆ ನಿಷ್ಠಾವಂತ ಅಭಿಯಾನಿಗಳನ್ನು ಹೊಂದುವ ಮೂಲಕ ಹೆಚ್ಚಿನ ಜನಪ್ರಿಯತೆಗೆ ಸಾಕ್ಷಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.