ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ
ಚಿತ್ರ: X / @RCBTweets
ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ (ಐಪಿಎಲ್) ಚೊಚ್ಚಲ ಪ್ರಶಸ್ತಿ ನಿರೀಕ್ಷೆಯಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು, 18ನೇ ಆವೃತ್ತಿಯಲ್ಲಿ ಗೆಲುವಿನೊಂದಿಗೆ ಅಭಿಯಾನ ಆರಂಭಿಸಿದೆ.
ಕೋಲ್ಕತ್ತದ ಈಡನ್ ಗಾರ್ಡನ್ಸ್‌ನಲ್ಲಿ ಶನಿವಾರ ರಾತ್ರಿ ನಡೆದ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೋಲ್ಕತ್ತ ನೈಟ್ ರೈಡರ್ಸ್ (ಕೆಕೆಆರ್) ಎದುರು ಎಲ್ಲ ವಿಭಾಗದಲ್ಲಿಯೂ ಅತ್ಯುತ್ತಮ ಆಟವಾಡಿದ ಆರ್‌ಸಿಬಿ, 7 ವಿಕೆಟ್ ಅಂತರದ ಜಯ ಸಾಧಿಸಿದೆ.
ಆ ಜಯದ ಸಂಭ್ರಮದೊಂದಿಗೆ ಆರ್‌ಸಿಬಿ ಮತ್ತೊಂದು ವಿಚಾರವನ್ನು ಹಂಚಿಕೊಂಡಿದೆ. ಒಮ್ಮೆಯೂ 'ಕಪ್' ಗೆಲ್ಲದಿದ್ದರೂ ಅಪಾರ ಅಭಿಮಾನಿ ಬಳಗವನ್ನು ಹೊಂದಿರುವ ಈ ಫ್ರಾಂಚೈಸಿ, ಇನ್‌ಸ್ಟಾಗ್ರಾಂನಲ್ಲಿ ತನ್ನ ಅಧಿಕೃತ ಪುಟವನ್ನು 1.71 ಕೋಟಿ ಜನರು ಹಿಂಬಾಲಿಸುತ್ತಿದ್ದಾರೆ ಎಂದು ತಿಳಿಸಿದೆ.
ಅಂದಹಾಗೆ, ಇನ್‌ಸ್ಟಾಗ್ರಾಂನಲ್ಲಿ ಅತಿಹೆಚ್ಚು ಫಾಲೋವರ್ಸ್ ಇರುವ ತಂಡ ಚೆನ್ನೈ ಸೂಪರ್ ಕಿಂಗ್ಸ್. ಐದು ಬಾರಿ ಚಾಂಪಿಯನ್ ಪಟ್ಟಕ್ಕೇರಿರುವ ಈ ತಂಡಕ್ಕೆ 1.73 ಕೋಟಿ ಹಿಂಬಾಲಕರಿದ್ದಾರೆ. ನಂತರದ ಸ್ಥಾನದಲ್ಲಿ ಆರ್‌ಸಿಬಿ ಇದೆ. ಐಪಿಎಲ್‌ನ ಅತ್ಯಂತ ಯಶಸ್ವಿ ತಂಡಗಳಲ್ಲಿ ಒಂದಾದ ಮುಂಬೈ ಇಂಡಿಯನ್ಸ್‌ಗೆ 1.59 ಕೋಟಿ ಫಾಲೋವರ್ಸ್ ಇದ್ದಾರೆ. ಉಳಿದಂತೆ ಬೇರಾವ ತಂಡಕ್ಕೂ 70 ಲಕ್ಷಕ್ಕಿಂತ ಹೆಚ್ಚು ಫಾಲೋವರ್ಸ್ ಇಲ್ಲ.
ಐಪಿಎಲ್ ತಂಡಗಳಿಗೆ ವಿವಿಧ ವೇದಿಕೆಗಳಲ್ಲಿ ಎಷ್ಟು ಫಾಲೊವರ್ಸ್ ಇದ್ದಾರೆ ಎಂಬ ಮಾಹಿತಿ ಇಲ್ಲಿದೆ.
2025ರ ಮಾರ್ಚ್ 23ರ ವರೆಗೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.