ADVERTISEMENT

ಆರ್‌ಸಿಬಿಗೆ ಕ್ಯಾಟಿಚ್‌ ಕೋಚ್‌

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2019, 20:28 IST
Last Updated 23 ಆಗಸ್ಟ್ 2019, 20:28 IST
ಸೈಮನ್‌ ಕ್ಯಾಟಿಚ್‌
ಸೈಮನ್‌ ಕ್ಯಾಟಿಚ್‌   

ಬೆಂಗಳೂರು: ಆಸ್ಟ್ರೇಲಿಯಾದ ಹಿರಿಯ ಆಟಗಾರ ಸೈಮನ್‌ ಕ್ಯಾಟಿಚ್‌ ಅವರನ್ನು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ತಂಡದ ಮುಖ್ಯ ಕೋಚ್‌ ಆಗಿ ನೇಮಿಸಲಾಗಿದೆ.

ನ್ಯೂಜಿಲೆಂಡ್‌ನ ಹಿರಿಯ ಕ್ರಿಕೆಟಿಗ ಮೈಕ್‌ ಹೆಸನ್‌ ಅವರು ಕ್ರಿಕೆಟ್‌ ಆಪರೇಷನ್‌ ವಿಭಾಗದ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ.

ಹಿಂದಿನ ಆವೃತ್ತಿಯ ಐಪಿಎಲ್‌ನಲ್ಲಿ ತಂಡದ ಮುಖ್ಯ ಕೋಚ್‌ ಆಗಿದ್ದ ದಕ್ಷಿಣ ಆಫ್ರಿಕಾದ ಗ್ಯಾರಿ ಕರ್ಸ್ಟನ್‌ ಹಾಗೂ ಬೌಲಿಂಗ್‌ ಕೋಚ್‌ ಆಗಿದ್ದ ಭಾರತದ ಆಶಿಶ್‌ ನೆಹ್ರಾ ಅವರನ್ನು ಕೈಬಿಡಲಾಗಿದೆ.

ADVERTISEMENT

ಹೆಸನ್‌ ಅವರು ಈ ಮೊದಲು ನ್ಯೂಜಿಲೆಂಡ್‌ ತಂಡದ ಕೋಚ್‌ ಆಗಿದ್ದರು. ಅವರ ಮಾರ್ಗದರ್ಶನದಲ್ಲಿ ಕೇನ್‌ ವಿಲಿಯಮ್ಸನ್‌ ಪಡೆ ಈ ಬಾರಿಯ ಏಕದಿನ ವಿಶ್ವಕಪ್‌ನಲ್ಲಿ ರನ್ನರ್ಸ್‌ ಅಪ್‌ ಸಾಧನೆ ಮಾಡಿತ್ತು.

ಕ್ಯಾಟಿಚ್‌ ಅವರು ಈ ಹಿಂದೆ ಕೋಲ್ಕತ್ತ ನೈಟ್‌ ರೈಡರ್ಸ್‌ ತಂಡದ ಸಹಾಯಕ ಕೋಚ್‌ ಆಗಿ ಕೆಲಸ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.