ಯಶ್ ದಯಾಳ್
(ಪ್ರಜಾವಾಣಿ ಸಂಗ್ರಹ ಚಿತ್ರ)
ಗಾಜಿಯಾಬಾದ್: ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಅಡಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಆಟಗಾರ ಯಶ್ ದಯಾಳ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ಪೊಲೀಸರು ಇಂದು (ಮಂಗಳವಾರ) ತಿಳಿಸಿದ್ದಾರೆ.
27 ವರ್ಷದ ಯಶ್ ದಯಾಳ್ ವಿರುದ್ಧ ಗಾಜಿಯಾಬಾದ್‌ನ ಇಂದಿರಾಪುರಂ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಸೆಕ್ಷನ್ 69ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ಐಜಿಆರ್‌ಎಸ್ ಮೂಲಕ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಮಹಿಳೆ ದೂರು ನೀಡಿದ್ದರು. ದೂರಿನಲ್ಲಿ ಯಶ್ ಕಳೆದ ಐದು ವರ್ಷಗಳಿಂದ ತನ್ನೊಂದಿಗೆ ಸಂಬಂಧ ಹೊಂದಿದ್ದು, ಲೈಂಗಿಕ ಶೋಷಣೆಗೆ ಗುರಿಯಾಗಿದ್ದೇನೆ ಎಂದು ಆರೋಪಿಸಿದ್ದಾರೆ.
ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಸಂಪರ್ಕ ಮಾಡಿರುವ ಆರೋಪ ಯಶ್ ಅವರ ಮೇಲಿದೆ. ಈ ಸಂಬಂಧ ಯಶ್ ದಯಾಳ್ ಅವರಿಂದ ಪ್ರತಿಕ್ರಿಯೆ ಬಂದಿಲ್ಲ.
ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಆರ್‌ಸಿಬಿ ಚೊಚ್ಚಲ ಟ್ರೋಫಿ ಗೆಲ್ಲುವಲ್ಲಿ ಎಡಗೈ ವೇಗಿ ಯಶ್ ದಯಾಳ್ ಪ್ರಮುಖ ಪಾತ್ರ ವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.