ಮುಂಬೈ: ಮುಂಬೈ ಇಂಡಿಯನ್ಸ್ ವಿರುದ್ಧ ಸೋಮವಾರ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನಿಗದಿತ ಅವಧಿಯೊಳಗೆ ಓವರುಗಳನ್ನು ಪೂರೈಸದ ಕಾರಣಕ್ಕೆ ನಾಯಕ ರಜತ್ ಪಾಟೀದಾರ್ ಅವರಿಗೆ ₹12 ಲಕ್ಷ ದಂಡ ವಿಧಿಸಲಾಗಿದೆ.
‘ಇದು ಈ ಋತುವಿನಲ್ಲಿ ಈ ತಂಡ ಈ ರೀತಿಯ ಮೊದಲ ತಪ್ಪು ಮಾಡದಿ ಕಾರಣ 2.2 ಕಲಮಿನಡಿ ಪಾಟೀದಾರ ಅವರಿಗೆ ₹12 ಲಕ್ಷ ದಂಡ ವಿಧಿಸಲಾಗಿದೆ’ ಎಂದು ಐಪಿಎಲ್ ಮಾಧ್ಯಮ ಪ್ರಕಟಣೆ ತಿಳಿಸಿದೆ. ಈ ಪಂದ್ಯವನ್ನು ಬೆಂಗಳೂರಿನ ತಂಡ 12 ರನ್‌ಗಳಿಂದ ಗೆದ್ದುಕೊಂಡಿತ್ತು.
ಪಾಯಿಂಟ್ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿರುವ ಆರ್‌ಸಿಬಿ ತನ್ನ ಮುಂದಿನ ಪಂದ್ಯವನ್ನು ಏಪ್ರಿಲ್ 10ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಡಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.