ADVERTISEMENT

IPL 2023 | ಕೊಹ್ಲಿ ಅರ್ಧಶತಕ, ಡೆಲ್ಲಿ ಗೆಲುವಿಗೆ 175 ರನ್ ಗುರಿ ನೀಡಿದ ಆರ್‌ಸಿಬಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 15 ಏಪ್ರಿಲ್ 2023, 11:55 IST
Last Updated 15 ಏಪ್ರಿಲ್ 2023, 11:55 IST
ವಿರಾಟ್‌ ಕೊಹ್ಲಿ ಬ್ಯಾಟಿಂಗ್ ವೈಖರಿ
ವಿರಾಟ್‌ ಕೊಹ್ಲಿ ಬ್ಯಾಟಿಂಗ್ ವೈಖರಿ   

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲಿಂಗ್‌ನ (ಐಪಿಎಲ್‌) 20ನೇ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ ತಂಡಗಳು ಗೆಲುವಿಗಾಗಿ ಹೋರಾಟ ನಡೆಸುತ್ತಿವೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್‌, ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ಅದರಂತೆ ಮೊದಲ ಬ್ಯಾಟಿಂಗ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 174 ರನ್ ಗಳಿಸಿದೆ.

ಆರ್‌ಸಿಬಿ ಪರ ಆರಂಭಿಕ ಆಟಗಾರರಾದ ವಿರಾಟ್‌ ಕೊಹ್ಲಿ ಅರ್ಧಶತಕ (50) ಸಿಡಿಸಿ ಸಂಭ್ರಮಿಸಿದರು. ಉಳಿದಂತೆ ಮಹಿಪಾಲ್ ಲೊಮ್ರೋಡ್ 26, ಮ್ಯಾಕ್ಸ್‌ವೆಲ್ 24, ಫಫ್‌ ಡುಪ್ಲೆಸಿ 22 ರನ್ ಗಳಿಸಿ ತಂಡಕ್ಕೆ ಆಸರೆಯಾದರು.

ADVERTISEMENT

ಡೆಲ್ಲಿ ಪರ ಕುಲದೀಪ್ ಯಾದವ್, ಮಿಚೆಲ್ ಮಾರ್ಶ್ 2 ವಿಕೆಟ್ ಪಡೆದರೆ, ಲಲಿತ್ ಯಾದವ್ ಹಾಗೂ ಅಕ್ಷರ್ ಪಟೇಲ್ ತಲಾ ಒಂದೊಂದು ವಿಕೆಟ್ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.