ADVERTISEMENT

ಚಿನ್ನಸ್ವಾಮಿ ಅಲ್ಲ: ತವರು ಪಂದ್ಯಗಳಿಗೆ ಈ 2 ಮೈದಾನಗಳನ್ನು ಆರಿಸಿಕೊಂಡ RCB!

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 13 ಜನವರಿ 2026, 8:30 IST
Last Updated 13 ಜನವರಿ 2026, 8:30 IST
<div class="paragraphs"><p>ವಿರಾಟ್‌ ಕೊಹ್ಲಿ</p></div>

ವಿರಾಟ್‌ ಕೊಹ್ಲಿ

   

ಪಿಟಿಐ ಚಿತ್ರ

ಇಂಡಿಯನ್ ಪ್ರೀಮಿಯರ್ ಲೀಗ್ 2026ಕ್ಕೆ ಇನ್ನು ಮೂರು ತಿಂಗಳು ಮಾತ್ರ ಬಾಕಿ ಉಳಿದಿವೆ. ಈ ನಡುವೆ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಘಾತ ಎದುರಾಗಿದೆ. ಕಳೆದ ವರ್ಷ ಚಾಂಪಿಯನ್ ಆದ ಬಳಿಕ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತದಿಂದಾಗಿ ಆರ್‌ಸಿಬಿ 2026ನೇ ಆವೃತ್ತಿಯ ತವರು ಪಂದ್ಯಗಳನ್ನು ಬೆಂಗಳೂರಿನಲ್ಲಿ ಆಡುವುದಿಲ್ಲ ಎಂದು ವರದಿಯಾಗಿದೆ.

ADVERTISEMENT

ಎರಡು ಮೈದಾನಗಳ ಆಯ್ಕೆ

19ನೇ ಆವೃತ್ತಿಯ ಐಪಿಎಲ್‌ನಲ್ಲಿ ಆರ್‌ಸಿಬಿ ತನ್ನ ತವರು ಪಂದ್ಯಗಳನ್ನು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡುವುದಿಲ್ಲ ಎಂದು ವರದಿಯಾಗಿದೆ. ಬದಲಾಗಿ, ನವಿ ಮುಂಬೈನ ಡಿ.ವೈ. ಪಾಟೀಲ್ ಕ್ರೀಡಾಂಗಣ ಮತ್ತು ರಾಯಪುರದ ಶಾಹೀನ್ ವೀರ್ ನಾರಾಯಣ್ ಸಿಂಗ್ ಕ್ರೀಡಾಂಗಣದಲ್ಲಿ ಆಡಲಿದೆ ಎಂದು ವರದಿ ತಿಳಿಸಿದೆ.

‘ಐಪಿಎಲ್ 2026ರಲ್ಲಿ ಆರ್‌ಸಿಬಿ ತಂಡ 5 ಪಂದ್ಯಗಳನ್ನು ನವಿ ಮುಂಬೈನ ಡಿ.ವೈ. ಪಾಟೀಲ್ ಕ್ರೀಡಾಂಗಣದಲ್ಲಿ ಮತ್ತು 2 ಪಂದ್ಯಗಳನ್ನು ರಾಯಪುರದಲ್ಲಿ ಆಡಲಿದೆ. ಈ ಬಗ್ಗೆ ಅಧಿಕಾರಿಗಳ ಜೊತೆಗಿನ ಸಭೆಯ ಬಳಿಕ, ಅಂತಿಮಗೊಳಿಸಿರುವುದಾಗಿ ಬಳಿಕ ಆರ್‌ಸಿಬಿ ತಿಳಿಸಿದೆ’ ಎಂದು ಟೈಮ್ಸ್ ಆಫ್ ಇಂಡಿಯಾ ಮೂಲವೊಂದನ್ನು ಉಲ್ಲೇಖಿಸಿ ವರದಿ ಮಾಡಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.