
ನವದೆಹಲಿ: ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಕ್ರಿಕೆಟಿಗ ರಿಂಕು ಸಿಂಗ್ ಅವರ ತಂದೆ ಖಾನ್‌ಚಂದ್ ಸಿಂಗ್ ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ.
ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಅವರು, ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಅವರ ಕುಟುಂಬಕ್ಕೆ ನನ್ನ ಹೃದಯಪೂರ್ವಕ ಸಂತಾಪಗಳು ಎಂದು ತಿಳಿಸಿದ್ದಾರೆ.
ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಗ್ರೇಟರ್ ನೋಯ್ಡಾದ ಯಥಾರ್ಥ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಈ ವಾರ ಅವರ ಆರೋಗ್ಯ ಸ್ಥಿತಿ ಗಂಭೀರಗೊಂಡು ವೆಂಟಿಲೇಟರ್‌ನಲ್ಲಿ ಇರಿಸಲಾಗಿತ್ತು. ಆದ್ದರಿಂದ ರಿಂಕು ಸಿಂಗ್ ಅವರು ಟಿ20 ವಿಶ್ವಕಪ್ ಪಂದ್ಯಾವಳಿಯ ಜಿಂಬಾಬ್ವೆ ವಿರುದ್ಧದ ಸೂಪರ್ 8 ಪಂದ್ಯಕ್ಕೂ ಮುನ್ನ ಮನೆಗೆ ತೆರಳಿದ್ದರು.
ಅಪ್ಪನ ಸ್ಥಿತಿ ಗಂಭೀರಗೊಂಡಿದ್ದರೂ ಟಿ20 ವಿಶ್ವಕಪ್‌ನ ಕೆಲ ಪಂದ್ಯಗಳನ್ನು ಆಡುವ ಮೂಲಕ ರಿಂಕು ಸಿಂಗ್ ತಮ್ಮ ಬದ್ಧತೆ ಪ್ರದರ್ಶಿಸಿದ್ದಾರೆ ಎಂದು ಹರ್ಭಜನ್ ತಿಳಿಸಿದ್ದಾರೆ.
'ರಿಂಕು ಸಿಂಗ್ ಅವರ ತಂದೆ ಶ್ರೀ ಖಾನ್‌ಚಂದ್ ಸಿಂಗ್ ಜಿ ಅವರ ನಿಧನದ ಬಗ್ಗೆ ತಿಳಿದು ನೋವಾಯಿತು. ಟಿ20 ವಿಶ್ವಕಪ್ ಸಮಯದಲ್ಲಿ ತಮ್ಮ ಜವಾಬ್ದಾರಿಗಳಿಗೆ ಬದ್ಧರಾಗಿದ್ದ ರಿಂಕು ಮತ್ತು ಅವರ ಕುಟುಂಬಕ್ಕೆ ಇದು ಕಷ್ಟಕರ ಸಮಯವಾಗಿದೆ’ ಎಂದು ಹರ್ಭಜನ್ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.