ಮುಂಬೈ: ಆಸ್ಟ್ರೇಲಿಯಾ ಸರಣಿಗೂ ಮುನ್ನ, ಭಾರತದ ಮಾಜಿ ಸಹಾಯಕ ಕೋಚ್ ಹಾಗೂ ಮುಂಬೈ ತಂಡದ ಸಹ ಆಟಗಾರರಾಗಿದ್ದ ಅಭಿಷೇಕ್ ನಾಯರ್ ಅವರ ಮಾರ್ಗದರ್ಶನದಲ್ಲಿ ರೋಹಿತ್ ಶರ್ಮಾ ಅವರು ಶಿವಾಜಿ ಪಾರ್ಕ್ ಮೈದಾನದಲ್ಲಿ ಶುಕ್ರವಾರ ಸತತ ಎರಡು ಗಂಟೆಗಳ ಕಾಲ ಅಭ್ಯಾಸ ನಡೆಸಿದ್ದಾರೆ.
ರೋಹಿತ್ ಅವರು ಅಭ್ಯಾಸ ನಡೆಸುತ್ತಿದ್ದ ವೇಳೆ ಮುಂಬೈನ ಕೆಲವು ಸ್ಥಳೀಯ ಆಟಗಾರರು ಕೂಡ ಇದ್ದರು.
2011ರ ವಿಶ್ವಕಪ್ ವೇಳೆ ರೋಹಿತ್ ಶರ್ಮಾ ಅವರನ್ನು ತಂಡದಿಂದ ಕೈಬಿಟ್ಟ ವೇಳೆಯೂ, ಅಭಿಷೇಕ್ ನಾಯರ್ ಅವರು ರೋಹಿತ್‌ಗೆ ಮಾರ್ಗದರ್ಶನ ನೀಡಿದ್ದರು.
38 ವರ್ಷದ ರೋಹಿತ್ ಶರ್ಮಾ ಅವರು ಭಾರತದ ಪರ ಕೊನೆಯ ಬಾರಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಕಾಣಿಸಿಕೊಂಡಿದ್ದರು.
ಅ.19 ರಿಂದ ಆಸ್ಟ್ರೇಲಿಯಾ ವಿರುದ್ಧ 3 ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ. ರೋಹಿತ್ ಬದಲಿಗೆ ಶುಭಮನ್ ಗಿಲ್ ನಾಯಕತ್ವ ವಹಿಸಿಕೊಂಡಿದ್ದಾರೆ.
ಅ.15ರಂದು ಭಾರತ ತಂಡವು ಆಸ್ಟ್ರೇಲಿಯಾಗೆ ತೆರಳಲಿದೆ. ರೋಹಿತ್ ಶರ್ಮಾ ಮತ್ತು ವಿರಾಟ್, ಹಲವು ತಿಂಗಳ ಬಳಿಕ ಕ್ರಿಕೆಟ್ ಅಂಗಳದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.