ADVERTISEMENT

IPL 2023: ಧೋನಿ ಅವರ ಕೊನೆಯ ಐಪಿಎಲ್? ರೋಹಿತ್ ಹೇಳಿದ್ದೇನು?

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 29 ಮಾರ್ಚ್ 2023, 15:44 IST
Last Updated 29 ಮಾರ್ಚ್ 2023, 15:44 IST
   

ಮುಂಬೈ: ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಕೊನೆಯ ಬಾರಿಗೆ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿತ್ತು.

ಇದನ್ನು ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ, ಅಲ್ಲಗಳೆದಿದ್ದಾರೆ. ಫಿಟ್ ಆಗಿರುವ ಧೋನಿ ಇನ್ನೂ ಕೆಲವು ವರ್ಷ ಆಡುವ ಸಾಮರ್ಥ್ಯ ಹೊಂದಿದ್ದಾರೆ ಎಂದು ತಿಳಿಸಿದ್ದಾರೆ.

41 ವರ್ಷದ ಧೋನಿ, ಈ ಹಿಂದೆ ತವರಿನ ಅಂಗಣದಲ್ಲಿ ಅಭಿಮಾನಿಗಳ ಮುಂದೆ ಆಡುವುದಾಗಿ ಹೇಳಿದ್ದರು. ಇದರಿಂದಾಗಿ ಈ ಆವೃತ್ತಿಯ ಬಳಿಕ ಧೋನಿ ನಿವೃತ್ತಿಯಾಗಲಿದ್ದಾರೆ ಎಂದು ವರದಿಯಾಗಿತ್ತು.

ADVERTISEMENT

ಇದು ಎಂ.ಎಸ್ ಧೋನಿಯ ಕೊನೆಯ ಸೀಸನ್ ಆಗಿರಲಿದೆ ಎಂದು ಕಳೆದ ಎರಡು ಮೂರು ವರ್ಷಗಳಿಂದ ಕೇಳಿ ಬರುತ್ತಿದ್ದೇನೆ. ಆದರೆ ಅವರು ಇನ್ನೂ ಕೆಲವು ವರ್ಷ ಆಡಲು ಫಿಟ್ ಆಗಿದ್ದಾರೆ ಎಂದು ನಾನು ನಂಬುತ್ತೇನೆ ಎಂದು ರೋಹಿತ್ ಪ್ರತಿಕ್ರಿಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.