
ರೋಹಿತ್ ಶರ್ಮಾ
(ಪಿಟಿಐ ಚಿತ್ರ)
ವಡೋದರ: ಭಾರತ ಏಕದಿನ ಕ್ರಿಕೆಟ್ ತಂಡದ ಆರಂಭಿಕ ಬ್ಯಾಟರ್ ಹಾಗೂ ಮಾಜಿ ನಾಯಕ ರೋಹಿತ್ ಶರ್ಮಾ ಅವರು ನಿನ್ನೆ (ಭಾನುವಾರ) ನಡೆದ ಪಂದ್ಯದಲ್ಲಿ ಬೃಹತ್ ಮೊತ್ತ ಕಲೆಹಾಕಲು ವಿಫಲವಾದರು. ಆದರೆ, ಅವರು ವಿಶೇಷ ಮೈಲುಗಲ್ಲು ಒಂದನ್ನು ತಲುಪಿದ್ದಾರೆ.
ಸ್ಫೋಟಕ ಬ್ಯಾಟಿಂಗ್ ಮೂಲಕವೇ ಹೆಸರುವಾಸಿಯಾಗಿರುವ ರೋಹಿತ್ ಶರ್ಮಾ ಅವರು ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 29 ಎಸೆತಗಳಲ್ಲಿ 26 ರನ್ ಗಳಿಸಿ ಔಟ್ ಆದರು. ಇದರಲ್ಲಿ ಮೂರು ಬೌಂಡರಿ ಹಾಗೂ ಎರಡು ಸಿಕ್ಸರ್‌ಗಳು ಒಳಗೊಂಡಿದ್ದವು. ಈ ಸಿಕ್ಸರ್ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 650 ಸಿಕ್ಸರ್ ಸಿಡಿಸಿದ ದಾಖಲೆ ಮಾಡಿದರು.
ಮಾತ್ರವಲ್ಲ, ರೋಹಿತ್ ಶರ್ಮಾ ಅವರು ಏಕದಿನ ಕ್ರಿಕೆಟ್‌ನಲ್ಲಿ ಆರಂಭಿಕ ಬ್ಯಾಟರ್ ಆಗಿ ಅತೀ ಹೆಚ್ಚು ಸಿಕ್ಸರ್ ಸಿಡಿಸಿದ ಆಟಗಾರ ಎಂಬ ದಾಖಲೆ ತಮ್ಮದಾಗಿಸಿಕೊಂಡರು. ಇದಕ್ಕೂ ಮೊದಲು ಈ ದಾಖಲೆ 328 ಸಿಕ್ಸರ್ ಸಿಡಿಸಿರುವ ಕ್ರಿಸ್ ಗೇಲ್ ಅವರ ಹೆಸರಿನಲ್ಲಿತ್ತು. ನಿನ್ನೆಯ ಪಂದ್ಯಕ್ಕೂ ಮುನ್ನ 327 ಸಿಕ್ಸರ್ ಸಿಡಿಸಿದ್ದ ರೋಹಿತ್ ರೋಹಿತ್ ಶರ್ಮಾ, ನಿನ್ನೆ 2 ಸಿಕ್ಸರ್ ಸಿಡಿಸುವ ಮೂಲಕ ಗೇಯ್ಲ್ ದಾಖಲೆ ಮುರಿದಿದ್ದಾರೆ. ಸದ್ಯ ಏಕದಿನದಲ್ಲಿ ಆರಂಭಿಕರಾಗಿ 329* ಸಿಕ್ಸರ್ ಹೊಡೆದಿದ್ದಾರೆ.
ಸದ್ಯ, ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಒಟ್ಟು 650 ಸಿಕ್ಸರ್ ಸಿಡಿಸಿರುವ ರೋಹಿತ್ ಶರ್ಮಾ ಅವರು, ವಿಶ್ವ ಕ್ರಿಕೆಟ್‌ನಲ್ಲಿ ಯಾವುದೇ ಆಟಗಾರ ಮಾಡದ ಸಾಧನೆ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.