ADVERTISEMENT

Rohit Sharma Retirement: ಟೆಸ್ಟ್ ಕ್ರಿಕೆಟ್‌ಗೆ ರೋಹಿತ್ ಶರ್ಮಾ ವಿದಾಯ

ಪಿಟಿಐ
Published 7 ಮೇ 2025, 14:35 IST
Last Updated 7 ಮೇ 2025, 14:35 IST
<div class="paragraphs"><p>ರೋಹಿತ್ ಶರ್ಮಾ</p></div>

ರೋಹಿತ್ ಶರ್ಮಾ

   

(ಟೆಸ್ಟ್ ಕ್ರಿಕೆಟ್)

ನವದೆಹಲಿ: ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ, ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.

ADVERTISEMENT

38 ವರ್ಷದ ರೋಹಿತ್ ಶರ್ಮಾ, ಅಂತರರಾಷ್ಟ್ರೀಯ ಟ್ವೆಂಟಿ-20 ಕ್ರಿಕೆಟ್‌ಗೆ ಈಗಾಗಲೇ ನಿವೃತ್ತಿ ಘೋಷಿಸಿದ್ದಾರೆ.

'ಹಿಟ್‌ಮ್ಯಾನ್' ಖ್ಯಾತಿಯ ರೋಹಿತ್, 50 ಓವರ್‌ಗಳ ಏಕದಿನ ಕ್ರಿಕೆಟ್‌ನಲ್ಲಿ ಮುಂದುವರಿಯುವುದಾಗಿ ತಿಳಿಸಿದ್ದಾರೆ.

ಟೆಸ್ಟ್ ಕ್ರಿಕೆಟ್‌ನಲ್ಲಿ ರೋಹಿತ್ ಸಾಧನೆ:

  • ಪಂದ್ಯ: 67

  • ರನ್: 4,301

  • ಶತಕ: 12

  • ಅರ್ಧಶತಕ: 18

  • ಸರಾಸರಿ: 40.57

ಟಿ20 ವಿಶ್ವಕಪ್ ಗೆಲುವಿನ ಬಳಿಕ ರೋಹಿತ್ ಶರ್ಮಾ, ಚುಟುಕು ಪ್ರಕಾರಕ್ಕೆ ನಿವೃತ್ತಿ ಘೋಷಿಸಿದ್ದರು.

ಕಳೆದ ಆಸ್ಟ್ರೇಲಿಯಾ ಪ್ರವಾಸದಲ್ಲಿ ರೋಹಿತ್ ಮುಂದಾಳತ್ವದಲ್ಲಿ ಟೀಮ್ ಇಂಡಿಯಾ ಕಳಪೆ ಸಾಧನೆ ಮಾಡಿತ್ತು. ಇದಕ್ಕೂ ಮೊದಲು ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧ ಸರಣಿಯಲ್ಲೂ ಮುಖಭಂಗಕ್ಕೊಳಗಾಗಿತ್ತು.

ಇನ್‌ಸ್ಟಾಗ್ರಾಂನಲ್ಲಿ ಮಾಹಿತಿ ಹಂಚಿಕೊಂಡ ರೋಹಿತ್

ಮುಂದಿನ ನಾಯಕ ಯಾರು?

ರೋಹಿತ್ ನಿವೃತ್ತಿಯೊಂದಿಗೆ ಕ್ರಿಕೆಟ್‌ನ ದೀರ್ಘ ಮಾದರಿಯಲ್ಲಿ ಟೀಮ್ ಇಂಡಿಯಾದ ನಾಯಕ ಯಾರಾಗಲಿದ್ದಾರೆ ಎಂಬ ಚರ್ಚೆ ಹುಟ್ಟಿಕೊಂಡಿದೆ.

ಈ ಪಟ್ಟಿಯಲ್ಲಿ ಜಸ್‌ಪ್ರೀತ್ ಬೂಮ್ರಾ, ಕನ್ನಡಿಗ ಕೆ.ಎಲ್. ರಾಹುಲ್, ಶುಭಮನ್ ಗಿಲ್ ಹಾಗೂ ರಿಷಭ್ ಪಂತ್ ಹೆಸರುಗಳು ಮುಂಚೂಣಿಯಲ್ಲಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.