ADVERTISEMENT

IND vs SL: ನಾನ್‌ಸ್ಟ್ರೈಕರ್ ರನ್‌ಔಟ್ ಮನವಿ ಹಿಂಪಡೆದ ರೋಹಿತ್

ಪಿಟಿಐ
Published 10 ಜನವರಿ 2023, 19:30 IST
Last Updated 10 ಜನವರಿ 2023, 19:30 IST
ರೋಹಿತ್ ಶರ್ಮಾ ಮತ್ತು ದಸುನ್ ಶನಕಾ 
ರೋಹಿತ್ ಶರ್ಮಾ ಮತ್ತು ದಸುನ್ ಶನಕಾ    

ಗುವಾಹಟಿ: ಶ್ರೀಲಂಕಾ ಎದುರಿನ ಪಂದ್ಯದಲ್ಲಿ ‘ನಾನ್‌ಸ್ಟ್ರೈಕರ್‌ ರನ್‌ಔಟ್’ ಮನವಿಯೊಂದನ್ನು ಭಾರತ ತಂಡದ ನಾಯಕ ರೋಹಿತ್ ಶರ್ಮಾ ಹಿಂದೆಗೆದುಕೊಂಡರು.

ಪಂದ್ಯದ ಕೊನೆಯ ಓವರ್‌ನ ನಾಲ್ಕನೇ ಎಸೆತದ ಸಂದರ್ಭದಲ್ಲಿ ಲಂಕಾ ತಂಡದ ನಾಯಕ ದಸುನ್ ಶನಕಾ ಅವರು ನಾನ್‌ಸ್ಟ್ರೈಕರ್‌ ಕ್ರೀಸ್‌ನಿಂದ ಹೊರಗೆ ಸಾಗಿದ್ದರು. ಆಗ ಬೌಲರ್ ಮೊಹಮ್ಮದ್ ಶಮಿ ಬೇಲ್ಸ್‌ ಎಗರಿಸಿದರು. ವಿಕೆಟ್‌ಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಧ್ಯಪ್ರವೇಶ ಮಾಡಿದ ರೋಹಿತ್, ಮನವಿಯನ್ನು ಮರಳಿ ಪಡೆದರು. ಮತ್ತೊಂದು ವಿವಾದವಾಗುವುದನ್ನು ತಡೆದರು. ಆಗಿನ್ನೂ ಶನಕಾ ಶತಕಕ್ಕೆ ಎರಡು ರನ್‌ಗಳ ಅಗತ್ಯವಿತ್ತು.

ADVERTISEMENT

ಐದನೇ ಎಸೆತವನ್ನು ಎದುರಿಸಿದ ಶನಕಾ ಬೌಂಡರಿ ಗಳಿಸಿ ಶತಕ ಪೂರೈಸಿದರು. ಕೊನೆಯ ಎಸೆತದಲ್ಲಿ ಸಿಕ್ಸರ್‌ ಹೊಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.