ADVERTISEMENT

ಕೋವಿಡ್ ಎರಡನೇ ಅಲೆ: ರೋಗಿಗಳ ಚಿಕಿತ್ಸೆಗಾಗಿ ಒಂದು ಕೋಟಿ ದೇಣಿಗೆ ನೀಡಿದ ಸಚಿನ್

ಪಿಟಿಐ
Published 29 ಏಪ್ರಿಲ್ 2021, 19:30 IST
Last Updated 29 ಏಪ್ರಿಲ್ 2021, 19:30 IST
ಸಚಿನ್ ತೆಂಡೂಲ್ಕರ್
ಸಚಿನ್ ತೆಂಡೂಲ್ಕರ್   

ನವದೆಹಲಿ: ಕೋವಿಡ್ ರೋಗಿಗಳ ಚಿಕಿತ್ಸೆಗಾಗಿ ಆಮ್ಲಜನಕ ಪೂರೈಕೆ ಸಲಕರಣೆಗಳ ಖರೀದಿಗಾಗಿ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಒಂದು ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.

ಕೋವಿಡ್ ಎರಡನೇ ಅಲೆಯ ಅಬ್ಬರದಿಂದಾಗಿ ದೇಶದ ಹಲವು ನಗರಗಳಲ್ಲಿ ವೈದ್ಯಕೀಯ ಆಮ್ಲಜನಕದ ಕೊರತೆಯುಂಟಾಗಿದೆ. ಅದರಲ್ಲೂ ದೇಶದ ರಾಜಧಾನಿ ದೆಹಲಿಯಲ್ಲಿ ಸಮಸ್ಯೆ ಆಮ್ಲಜನಕದ ಕೊರತೆ ಸಮಸ್ಯೆಯು ಉಲ್ಬಣಿಸಿದೆ.

ಅದರಿಂದಾಗಿ ದೆಹಲಿಯ ಕೆಲವು ಯುವ ಉದ್ಯಮಿಗಳು ಸೇರಿ ’ಮಿಷನ್ ಆಕ್ಸಿಜನ್‘ ಅಭಿಯಾನ ಆರಂಭಿಸಿದ್ದಾರೆ.

ADVERTISEMENT

‘ಈ ಅಭಿಯಾನಕ್ಕೆ ಸಚಿನ್ ತೆಂಡೂಲ್ಕರ್ ಅವರು ಒಂದು ಕೋಟಿ ರೂಪಾಯಿ ನೀಡಿದ್ದಾರೆ‘ ಎಂದು ಸಂಚಾಲಕರು ತಿಳಿಸಿದ್ದಾರೆ.

ಈಚೆಗೆ ಸಚಿನ್ ಕೂಡ ಕೋವಿಡ್‌ ಸೋಂಕಿನಿಂದಾಗಿ ಅಸ್ಪತ್ರೆಗೆ ದಾಖಲಾಗಿದ್ದರು. ನಂತರ ಗುಣಮುಖರಾಗಿ ಮನೆಗೆ ಮರಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.