ADVERTISEMENT

ಸಚಿನ್ ತೆಂಡೂಲ್ಕರ್‌ಗೆ ಬಿಸಿಸಿಐ ಜೀವಮಾನ ಸಾಧನೆ ಪ್ರಶಸ್ತಿ

ಪಿಟಿಐ
Published 31 ಜನವರಿ 2025, 10:02 IST
Last Updated 31 ಜನವರಿ 2025, 10:02 IST
<div class="paragraphs"><p>ಸಚಿನ್‌ ತೆಂಡೂಲ್ಕರ್‌</p></div>

ಸಚಿನ್‌ ತೆಂಡೂಲ್ಕರ್‌

   

ಮುಂಬೈ: ಕ್ರಿಕೆಟ್‌ ದಂತಕಥೆ ಸಚಿನ್‌ ತೆಂಡೂಲ್ಕರ್‌ ಅವರು 2024ನೇ ಸಾಲಿನ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಕರ್ನಲ್‌ ಸಿ.ಕೆ. ನಾಯ್ದು ಜೀವಮಾನ ಸಾಧನೆ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಭಾರತದ ಪರ 664 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿರುವ ಸಚಿನ್ ಅವರ ಹೆಸರಿನಲ್ಲಿ ಟೆಸ್ಟ್‌, ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್‌ಗಳಿಸಿದ ದಾಖಲೆ ಇದೆ.

ADVERTISEMENT

ಕ್ರಿಕೆಟ್‌ ಕ್ಷೇತ್ರಕ್ಕೆ ಸಚಿನ್ ಅವರ ಕೊಡುಗೆ ಗಮನಿಸಿ, ಬಿಸಿಸಿಐ 2024ನೇ ಸಾಲಿನ ಕರ್ನಲ್‌ ಸಿ.ಕೆ ನಾಯ್ಡು ಜೀವಮಾನ ಸಾಧನೆ ಪ್ರಶಸ್ತಿ ನೀಡುತ್ತಿದೆ ಎಂದು ಮಂಡಳಿ ಪಿಟಿಐಗೆ ಮಾಹಿತಿ ನೀಡಿದೆ.

ಸಚಿನ್‌ 200 ಟೆಸ್ಟ್‌ ಪಂದ್ಯಗಳು, 463 ಏಕದಿನ ಪಂದ್ಯಗಳಲ್ಲಿ ಆಡುವ ಮೂಲಕ ಅತಿ ಹೆಚ್ಚು ಪಂದ್ಯವನ್ನಾಡಿದ ಕ್ರಿಕೆಟಿಗ ಎನಿಸಿಕೊಂಡಿದ್ದಾರೆ. ಟೆಸ್ಟ್‌ನಲ್ಲಿ  15,921 ರನ್‌ಗಳು ಹಾಗೂ ಏಕದಿನದಲ್ಲಿ 18,426 ರನ್‌ಗಳನ್ನು ಸಿಡಿಸಿದ್ದಾರೆ. ಸಚಿನ್‌ ತಮ್ಮ ವೃತ್ತಿ ಜೀವನದಲ್ಲಿ ಒಂದು ಅಂತರರಾಷ್ಟ್ರೀಯ ಟಿ20 ಪಂದ್ಯವನ್ನಾಡಿದ್ದಾರೆ.

2023ನೇ ಸಾಲಿನಲ್ಲಿ ಈ ಪ್ರಶಸ್ತಿ ಭಾರತ ತಂಡದ ಮಾಜಿ ಮುಖ್ಯ ಕೋಚ್ ರವಿ ಶಾಸ್ತ್ರಿ ಮತ್ತು ಮಾಜಿ ವಿಕೆಟ್‌ ಕೀಪರ್‌ ಫಾರೂಕ್ ಎಂಜಿನಿಯರ್ ಅವರಿಗೆ ಸಲ್ಲಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.