ಸರ್ಫರಾಜ್ ಖಾನ್
(ಪಿಟಿಐ ಚಿತ್ರ)
ಚೆನ್ನೈ: ಅಖಿಲ ಭಾರತ ಬುಚ್ಚಿ ಬಾಬು ಆಹ್ವಾನಿತ ಟೂರ್ನಿಯಲ್ಲಿ ಮುಂಬೈ ತಂಡದ ಬ್ಯಾಟರ್ ಸರ್ಫರಾಜ್ ಖಾನ್ ಬಿರುಸಿನ ಶತಕ ಗಳಿಸಿದ್ದಾರೆ.
ಹರಿಯಾಣ ವಿರುದ್ಧ ಪಂದ್ಯದಲ್ಲಿ ಸರ್ಫರಾಜ್ ಅಬ್ಬರಿಸಿದ್ದಾರೆ.
ಒಂದು ಹಂತದಲ್ಲಿ ಮೊದಲ ದಿನದಾಟದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಮುಂಬೈ 84 ರನ್ನಿಗೆ ನಾಲ್ಕು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.
ಮತ್ತೊಂದೆಡೆ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸಿದ ಸರ್ಫರಾಜ್, 112 ಎಸೆತಗಳಲ್ಲಿ ಒಂಬತ್ತು ಬೌಂಡರಿ ಹಾಗೂ ಐದು ಸಿಕ್ಸರ್‌ಗಳ ನೆರವಿನಿಂದ 111 ರನ್ ಗಳಿಸಿ ತಂಡಕ್ಕೆ ಆಸರೆಯಾದರು.
99ನೇ ಎಸೆತದಲ್ಲಿ ಸಿಕ್ಸರ್ ಬಾರಿಸುವ ಮೂಲಕ ಸರ್ಫರಾಜ್ 100ರ ಗಡಿ ದಾಟಿದರು.
ಇದೇ ಟೂರ್ನಿಯಲ್ಲಿ ಟಿಎನ್‌ಸಿಎ ಇಲೆವೆನ್ ವಿರುದ್ಧವೂ ಸರ್ಫರಾಜ್ 138 ರನ್ ಗಳಿಸಿದ್ದರು.
ಕಳೆದ ವರ್ಷ ಇಂಗ್ಲೆಂಡ್ ವಿರುದ್ಧ ರಾಜ್‌ಕೋಟ್ ಪಂದ್ಯದಲ್ಲಿ ಪದಾರ್ಪಣೆ ಮಾಡಿದ್ದ ಸರ್ಫರಾಜ್ ಅವರನ್ನು ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಕಡೆಗಣಿಸಲಾಗಿತ್ತು.
ಆದರೆ ಬುಚ್ಚಿ ಬಾಬು ಟೂರ್ನಿಯಲ್ಲಿ ಶತಕ ಬಾರಿಸುವ ಮೂಲಕ ಆಯ್ಕೆದಾರರಿಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.