ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯ ಜೆರ್ಸಿಗಳನ್ನು ಕಳವು ಮಾಡಿದ ಆರೋಪದಲ್ಲಿ ವಾಂಖೆಡೆ ಕ್ರೀಡಾಂಗಣದ ವ್ಯವಸ್ಥಾಪಕನನ್ನು ಪೊಲೀಸರು ಬಂಧಿಸಿದ್ದಾರೆ.
ಐಪಿಎಲ್‌ನ ಒಟ್ಟು ₹ 6.52 ಲಕ್ಷ ಮೌಲ್ಯದ 261 ಜೆರ್ಸಿಗಳನ್ನು ಕಳವು ಮಾಡಿದ್ದ ಆರೋಪದ ಮೇಲೆ ಫಾರೂಕ್ ಅಸ್ಲಂ ಖಾನ್ ಎಂಬಾತನನ್ನು ಬಂಧಿಸಲಾಗಿದೆ. ಇದೀಗ ಜಾಮೀನು ಪಡೆದಿರುವ ಆರೋಪಿಯ ಬಿಡುಗಡೆಯಾಗಿದೆ. ಇಲ್ಲಿರುವ ಐಪಿಎಲ್ ಸಾಮಗ್ರಿಗಳ ಮಾರಾಟ ಮಳಿಗೆಯಿಂದ ಆರೋಪಿಯು ಕಳವು ಮಾಡಿದ್ದನೆನ್ನಲಾಗಿದೆ. ಈ ಬಗ್ಗೆ ಬಿಸಿಸಿಐ ಅಧಿಕಾರಿಗಳು ಮರೀನ್ ಡ್ರೈವ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸರು ಆರೋಪಿಯಿಂದ ಸುಮಾರು 50 ಜೆರ್ಸಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.