ADVERTISEMENT

ಐಸಿಸಿ ರ‍್ಯಾಂಕಿಂಗ್: ಶೆಫಾಲಿಗೆ ಅಗ್ರಸ್ಥಾನ

​ಪ್ರಜಾವಾಣಿ ವಾರ್ತೆ
Published 26 ಜನವರಿ 2022, 2:27 IST
Last Updated 26 ಜನವರಿ 2022, 2:27 IST
ಶೆಫಾಲಿ ವರ್ಮಾ
ಶೆಫಾಲಿ ವರ್ಮಾ   

ದುಬೈ: ಭಾರತದ ಕ್ರಿಕೆಟ್ ಆಟಗಾರ್ತಿ ಶೆಫಾಲಿ ವರ್ಮಾ ಅಂತರರಾಷ್ಟ್ರೀ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಮಹಿಳೆಯರ ಟಿ20 ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನ ಗಳಿಸಿದ್ದಾರೆ.

ಮಂಗಳವಾರ ಪ್ರಕಟವಾದ ಪಟ್ಟಿಯ ಬ್ಯಾಟಿಂಗ್ ವಿಭಾಗದಲ್ಲಿ ಶೆಫಾಲಿ ಮೊದಲ ಸ್ಥಾನ ಗಳಿಸಿದ್ದಾರೆ. ಆಸ್ಟ್ರೇಲಿಯಾದ ಬೆತ್ ಮೂನಿ ಮತ್ತು ಮ್ಯಾಗ್‌ ಲ್ಯಾನಿಂಗ್ ಅವರು ಕ್ರಮವಾಗಿ ಎರಡು ಹಾಗೂ ಮೂರನೇ ಸ್ಥಾನ ಗಳಿಸಿದ್ದಾರೆ. ಭಾರತದ ಸ್ಮೃತಿ ಮಂದಾನ ನಾಲ್ಕನೇ ಸ್ಥಾನದಲ್ಲಿದ್ದಾರೆ.

ನ್ಯೂಜಿಲೆಂಡ್‌ನ ಸೋಫಿ ಡಿವೈನ್ ಮತ್ತು ಸೂಜಿ ಬೇಟ್ಸ್‌ ಕ್ರಮವಾಗಿ ಐದು ಹಾಗೂ ಏಳನೇ ಸ್ಥಾನ ಪಡೆದಿದ್ದಾರೆ. ಶ್ರೀಲಂಕಾದ ಚಾಮರಿ ಅಟಪಟ್ಟು ಅಗ್ರ 10ರೊಳಗೆ ಸ್ಥಾನ ಗಿಟ್ಟಿಸಿದ್ದಾರೆ.

ADVERTISEMENT

ಅವರು ಕಾಮನ್‌ವೆಲ್ತ್ ಗೇಮ್ಸ್‌ ಕ್ವಾಲಿಫೈಯರ್‌ನಲ್ಲಿ 221 ರನ್‌ಗಳನ್ನು ಕಲೆಹಾಕಿದ್ದರು. ಇದರೊಂದಿಗೆ ಎಂಟನೇ ಸ್ಥಾನ ಪಡೆದಿದ್ದಾರೆ. ಇಂಗ್ಲೆಂಡ್‌ನ ಡ್ಯಾನಿ ವೈಟ್ 13ನೇ ಸ್ಥಾನದಲ್ಲಿದ್ದಾರೆ.

ಬೌಲರ್‌ಗಳ ವಿಭಾಗದಲ್ಲಿ ಮೊದಲ ಮೂರು ಸ್ಥಾನಗಳಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ. ಇಂಗ್ಲೆಂಡ್‌ನ ಸೋಫಿ ಎಕ್ಸೆಲ್‌ಸ್ಟೊನ್ ಮತ್ತು ಸಾರಾ ಗ್ಲೆನ್ ಕ್ರಮವಾಗಿ ಪ್ರಥಮ ಹಾಗೂ ದ್ವಿತೀಯ ಸ್ಥಾನದಲ್ಲಿದ್ದಾರೆ. ದಕ್ಷಿಣ ಆಫ್ರಿಕಾದ ಶಬ್ನಿಮ್ ಇಸ್ಮಾಯಿಲ್ ಮೂರನೇ ಸ್ಥಾನ ಉಳಿಸಿಕೊಂಡಿದ್ದಾರೆ. ಭಾರತದ ದೀಪ್ತಿ ಶರ್ಮಾ ಒಂದು ಸ್ಥಾನ ಬಡ್ತಿ ಪಡೆದಿದ್ದಾರೆ. ಆಸ್ಟ್ರೇಲಿಯಾದ ಮೆಗನ್ ಶೂಟ್ ಅವರನ್ನು ಹಿಂದಿಕ್ಕಿ ನಾಲ್ಕನೇ ಸ್ಥಾನಕ್ಕೇರಿದ್ದಾರೆ.

ಆಲ್‌ರೌಂಡರ್ ವಿಭಾಗದಲ್ಲಿ ಸೋಫಿ ಡಿವೈನ್ ಮತ್ತು ನಥಾಲಿ ಶಿವರ್ ಮೊದಲೆರಡು ಸ್ಥಾನಗಳಲ್ಲಿದ್ದಾರೆ. ದೀಪ್ತಿ ಶರ್ಮಾ ಮೂರನೇ ಸ್ಥಾನ ಗಳಿಸಿದ್ಧಾರೆ. ಪಾಕಿಸ್ತಾನದ ನಿದಾ ದಾರ್ ಮತ್ತು ಥಾಯ್ಲೆಂಡ್‌ನ ನತ್ಯಾ ಭೂಚಾತಮ್ ಕ್ರಮವಾಗಿ ಒಂಬತ್ತು ಮತ್ತು ಹತ್ತನೇ ಸ್ಥಾನಕ್ಕೇರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.