ನವದೆಹಲಿ: ವಿಶ್ವಕಪ್ ಕ್ರಿಕೆಟ್ ಪಂದ್ಯದಲ್ಲಿ ಭಾರತದ ಕ್ರಿಕೆಟ್ ತಂಡ ಪಾಕಿಸ್ತಾನದ ವಿರುದ್ಧ ಆಡಬಾರದು ಎಂದು ಮಾಜಿ ಕ್ರಿಕೆಟಿಗ, ಬಿಜೆಪಿ ಸಂಸದ ಗೌತಮ್ ಗಂಭೀರ್ ಸಲಹೆ ನೀಡಿದ್ದಾರೆ. ಗಂಭೀರ್ ಸಲಹೆ ಬಗ್ಗೆ ಪ್ರತಿಕ್ರಿಯಿಸಿದ ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಶಾಹಿದ್ ಅಫ್ರೀದಿ ಇದು ಮೂರ್ಖತನ ಎಂದಿದ್ದಾರೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಫ್ರೀದಿ, ಭಾರತದ ಮತದಾರರು ವಿವೇಕವಿಲ್ಲದ ವ್ಯಕ್ತಿಗೆ ಮತಹಾಕಿದ್ದಾರೆ.ಗೌತಮ್ ಗಂಭೀರ್ ಹೇಳಿರುವುದು ಪ್ರಜ್ಞೆಯಿಂದ ಕೂಡಿದ ಮಾತು ಎಂದು ನೀವು ಅಂದುಕೊಂಡಿದ್ದೀರಾ? ಪ್ರಜ್ಞಾವಂತ ವ್ಯಕ್ತಿಯೊಬ್ಬರು ಹೇಳುವ ಮಾತು ಇದಾ? ಶಿಕ್ಷಿತ ವ್ಯಕ್ತಿಯೊಬ್ಬರು ಈ ರೀತಿ ಮಾತನಾಡುತ್ತಾರಾ? ಎಂದು ಪ್ರಶ್ನಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.