
ಸೋಫಿ ಜತೆ ಅದ್ಧೂರಿಯಾಗಿ ಮದುವೆಯಾದ ಮಾಜಿ ಕ್ರಿಕೆಟಿಗ ಶಿಖರ್ ಧವನ್
ಚಿತ್ರ: ಇನ್‌ಸ್ಟಾಗ್ರಾಂ
ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಶಿಖರ್ ಧವನ್ ಅವರು ಬಹುಕಾಲದ ಗೆಳತಿ ಸೋಫಿ ಶೈನ್ ಅವರೊಂದಿಗೆ ಶನಿವಾರ ಅದ್ಧೂರಿಯಾಗಿ ವಿವಾಹವಾಗಿದ್ದಾರೆ.
ದೆಹಲಿ ಎನ್‌ಸಿಆರ್‌ನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಕುಟುಂಬದವರು ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ಶಿಖರ್ ಹಾಗೂ ಸೋಫಿ ಜೀವನದ ಹೊಸ ಅಧ್ಯಾಯ ಆರಂಭಿಸಿದ್ದಾರೆ.
40ರ ಹರೆಯದಲ್ಲಿರುವ ಶಿಖರ್, 35 ವರ್ಷದ ಸೋಫಿಯೊಂದಿಗೆ ಎರಡನೇ ಮದುವೆಯಾಗಿದ್ದಾರೆ.
2025ರಲ್ಲಿ ಇಬ್ಬರೂ ಡೇಟಿಂಗ್‌ನಲ್ಲಿರುವುದು ಬಹಿರಂಗವಾಗಿತ್ತು. 2026ರ ಜನವರಿಯಲ್ಲಿ ಶಿಖರ್ ಹಾಗೂ ಸೋಫಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು.
ಶಿಖರ್ ಧವನ್ ಮದುವೆಯಲ್ಲಿ ಭಾಗಿಯಾಗಿದ್ದ ಕ್ರಿಕೆಟಿಗ ಯಜುವೇಂದ್ರ ಚಾಹಲ್ ದಂಪತಿಯ ಫೋಟೊಗಳನ್ನು ಹಂಚಿಕೊಂಡಿದ್ದಾರೆ. ಜತೆಗೆ ಮದುವೆ ಸಮಾರಂಭದಲ್ಲಿ ಕುಣಿದು ಕುಪ್ಪಳಿಸಿದ್ದಾರೆ. ಅದರ ವಿಡಿಯೊಗಳನ್ನೂ ಹಂಚಿಕೊಂಡಿದ್ದಾರೆ.
ಶಿಖರ್ ಧವನ್ ಮದುವೆಯ ಕ್ಷಣಗಳ ಫೋಟೊ ಹಂಚಿಕೊಂಡು, 'ಮಿಸ್ಟರ್ & ಮಿಸಸ್ ಧವನ್' ಎಂದು ಬರೆದುಕೊಂಡಿದ್ದಾರೆ.
ಮೂಲತಃ ಐರ್ಲೆಂಡ್ ದೇಶದವರಾದ ಸೋಫಿ, ಸದ್ಯ ಅಬುಧಾಬಿಯಲ್ಲಿರುವ 'ನಾರ್ದರ್ನ್ ಟ್ರಸ್ಟ್ ಕಾರ್ಪೊರೇಷನ್' ಎಂಬ ಹಣಕಾಸು ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಜತೆಗೆ 'ಶಿಖರ್ ಧವನ್ ಫೌಂಡೇಶನ್'ನ ಮುಖ್ಯಸ್ಥರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ,
ಶಿಖರ್ ಧವನ್ ಈ ಹಿಂದೆ ಆಯೇಷಾ ಮುಖರ್ಜಿ ಅವರನ್ನು ವಿವಾಹವಾಗಿದ್ದರು. 2023ರಲ್ಲಿ ಇಬ್ಬರೂ ವಿಚ್ಛೇದನ ಪಡೆದುಕೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.