
ಶಿಖರ್ ಧವನ್, ಸೂಫಿ ಶೈನ್
ಚಿತ್ರ: ಇನ್‌ಸ್ಟಾಗ್ರಾಂ
ಟೀಂ ಇಂಡಿಯಾ ಮಾಜಿ ಆಟಗಾರ ಶಿಖರ್ ಧವನ್ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿದೆ. ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಡಲು ಶಿಖರ್ ಧವನ್ ಸಜ್ಜಾಗಿದ್ದಾರೆ. ಈ ಮೂಲಕ ತಮ್ಮ ದಾಂಪತ್ಯ ಜೀವನದಲ್ಲೂ ಎರಡನೇ ಇನಿಂಗ್ಸ್ ಆರಂಭಿಸುತ್ತಿದ್ದಾರೆ.
ಶಿಖರ್ ಧವನ್, ಸೂಫಿ ಶೈನ್
ಐರ್ಲೆಂಡ್ ಮೂಲದ ಕ್ರಿಕೆಟ್ ಆಟಗಾರ್ತಿ ಸೋಫಿ ಶೈನ್ ಜೊತೆಗೆ ಮಾಜಿ ಕ್ರಿಕೆಟಿಗ ವಿವಾಹವಾಗಲಿದ್ದಾರೆ. ನಿನ್ನೆ (ಫೆ.20) ಧವನ್ ತಮ್ಮ ಸಂಗೀತ ಶಾಸ್ತ್ರದ ಫೋಟೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಇದೀಗ ಈ ಇಬ್ಬರ ಮದುವೆ ಸಮಾರಂಭವು ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ನಡೆಯುವ ಸಾಧ್ಯತೆಯಿದೆ. ಈ ಮದುವೆಗೆ ಕ್ರಿಕೆಟ್ ತಾರೆಯರು, ಬಾಲಿವುಡ್ ನಟ–ನಟಿಯರು ಆಗಮಿಸುವ ನಿರೀಕ್ಷೆಯಿದೆ.
ಇತ್ತೀಚೆಗೆ ಶಿಖರ್ ಧವನ್ ಹಾಗೂ ಸೋಫಿ ಶೈನ್ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಆ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಹರಿದಾಡಿದ್ದವು. ಶಿಖರ್ ಧವನ್ ಈ ಹಿಂದೆ ಆಸ್ಟ್ರೇಲಿಯಾ ಮೂಲದ ಆಯೇಷಾ ಮುಖರ್ಜಿ ಎಂಬುವವರನ್ನು ವಿವಾಹವಾಗಿದ್ದರು. ಈ ದಂಪತಿಗಳಿಗೆ ಜೋರಾವರ್ ಧವನ್ ಹೆಸರಿನ 11 ವರ್ಷದ ಮಗನಿದ್ದಾನೆ. ಆದರೆ 2023ರಲ್ಲಿ ದಂಪತಿ ಕಾನೂನು ಮುಖಾಂತರ ವಿಚ್ಛೇದನ ಪಡೆದು ಪರಸ್ಪರ ಬೇರೆ ಬೇರೆ ವಾಸಿಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.