ADVERTISEMENT

ಕ್ರಿಕೆಟ್: ಶ್ರೇಯಸ್ ಅಯ್ಯರ್‌ಗೆ ಏಕದಿನ ತಂಡದ ನಾಯಕತ್ವ?

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2025, 23:51 IST
Last Updated 21 ಆಗಸ್ಟ್ 2025, 23:51 IST
ಶ್ರೇಯಸ್ ಅಯ್ಯರ್ 
ಶ್ರೇಯಸ್ ಅಯ್ಯರ್    

ಬೆಂಗಳೂರು: ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಆಡುವ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಆದರೆ ಶ್ರೇಯಸ್ ಅಯ್ಯರ್ ಅವರನ್ನು ಆಯ್ಕೆ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ. 

ಆದರೆ ಶುಕ್ರವಾರ ಸಂಜೆಯಿಂದ ಸಾಮಾಜಿಕ ಜಾಲತಾಣಗಳು ಮತ್ತು ವೆಬ್‌ಸೈಟ್‌ಗಳಲ್ಲಿ ಪ್ರಕಟವಾಗಿರುವ ಸುದ್ದಿಗಳ ಪ್ರಕಾರ ಶ್ರೇಯಸ್ ಅವರನ್ನು  ಭಾರತ ಏಕದಿನ ಕ್ರಿಕೆಟ್ ತಂಡದ ನಾಯಕರನ್ನಾಗಿ ಮಾಡುವ ಬಗ್ಗೆ ಸಿದ್ಧತೆ ನಡೆದಿದೆ ಎನ್ನಲಾಗಿದೆ. ಮುಂಬರುವ ಆಸ್ಟ್ರೇಲಿಯಾ ಎದುರಿನ ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ ಅವರು ನಾಯಕರಾಗಿ ತಂಡವನ್ನು ಮುನ್ನಡೆಸುವ ಸಾಧ್ಯತೆ ಇದೆ. ಅದರ ನಂತರದ ಸರಣಿಗಳಲ್ಲಿ ಶ್ರೇಯಸ್ ಅವರಿಗೆ ನಾಯಕತ್ವ ನೀಡುವ ಕುರಿತು ಬಿಸಿಸಿಐನಲ್ಲಿ ಚಿಂತನೆ ನಡೆದಿದೆ ಎನ್ನಲಾಗಿದೆ. 

ಭಾರತ ತಂಡವು ಚಾಂಪಿಯನ್ಸ್ ಟ್ರೋಫಿ ಜಯಿಸುವಲ್ಲಿ ಅವರು ಪ್ರಮುಖ ಪಾತ್ರವಹಿಸಿದ್ದರು. ಅದರಿಂದಾಗಿ ಅವರಿಗೆ ಏಕದಿನ ಮಾದರಿಯ ನಾಯಕತ್ವ ನೀಡಲು ಯೋಚಿಸಲಾಗುತ್ತಿದೆ ಎಂದು ಹೇಳಲಾಗಿದೆ. 

ADVERTISEMENT

ಅವರ ನಾಯಕತ್ವದ ಪಂಜಾಬ್ ಕಿಂಗ್ಸ್‌ ತಂಡವು ಐಪಿಎಲ್‌ ಫೈನಲ್ ತಲುಪಿತ್ತು. ಅಲ್ಲದೇ ಐಪಿಎಲ್‌ನಲ್ಲಿ ಅವರ ಬ್ಯಾಟಿಂಗ್ ಕೂಡ ರಂಗೇರಿತ್ತು. ಆದರೂ ಅವರಿಗೆ ಭಾರತ ತಂಡದಲ್ಲಿ ಸ್ಥಾನ ನೀಡದಿರುವುದು ಕ್ರಿಕೆಟ್‌ ವಲಯದಲ್ಲಿ ಅಚ್ಚರಿಗೆ ಕಾರಣವಾಗಿತ್ತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.