
ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯದ ವೇಳೆ ಕ್ಷೇತ್ರ ರಕ್ಷಣೆ ಮಾಡುವಾಗ ಗಾಯಗೊಂಡಿದ್ದ ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಅವರನ್ನು ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಬಿಸಿಸಿಐ ಶನಿವಾರ ತಿಳಿಸಿದೆ.
ಆಸೀಸ್ ವಿರುದ್ದದ ಮೂರನೇ ಏಕದಿನ ಪಂದ್ಯದಲ್ಲಿ ಹರ್ಷಿತ್ ರಾಣಾ ಬೌಲಿಂಗ್‌ನಲ್ಲಿ ಅಲೆಕ್ಸ್ ಕ್ಯಾರಿ ಬಾರಿಸಿದ ಹೊಡೆತವನ್ನು ಕ್ಯಾಚ್ ಪಡೆಯುವ ವೇಳೆ ಶ್ರೇಯಸ್ ಅಯ್ಯರ್ ಅವರು ಗಾಯಗೊಂಡಿದ್ದರು. ತಕ್ಷಣವೇ ಮೈದಾನ ತೊರೆದ ಅವರನ್ನು ಸಿಡ್ನಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.
ಭಾರತ ಏಕದಿನ ತಂಡದ ಉಪನಾಯಕನಾಗಿರುವ ಶ್ರೇಯಸ್ ಅಯ್ಯರ್ ಅವರು ಪಕ್ಕೆಲುಬಿನ ಗಾಯಕ್ಕೆ ಚಿಕಿತ್ಸೆ ಪಡೆದುಕೊಂಡಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಆಸ್ಟ್ರೇಲಿಯಾ ಹಾಗೂ ಭಾರತದ ವೈದ್ಯರು ಅವರಿಗೆ ಅತ್ಯುತ್ತಮ ಚಿಕಿತ್ಸೆ ನೀಡಿದ್ದು, ಅವರ ಆರೋಗ್ಯ ಸುಧಾರಿಸಿದೆ. ಬಿಸಿಸಿಐ ವೈದ್ಯಕೀಯ ತಂಡವು ಕೂಡ ಅವರ ಮೇಲೆ ನಿಗಾವಹಿಸಿದೆ ಎಂದು ಹೇಳಿದೆ.
ಅಯ್ಯರ್ ಅವರು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಸಂಪೂರ್ಣ ಗುಣಮುಖರಾದ ಮೇಲೆ ಭಾರತಕ್ಕೆ ಮರಳಲಿದ್ದಾರೆ. ಅವರಿಗೆ ಇನ್ನೂ ಎರಡು ತಿಂಗಳ ವಿಶ್ರಾಂತಿಯ ಅಗತ್ಯವಿದೆ ಎಂದು ಮಾಹಿತಿ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.