
ಗಾಯಗೊಂಡ ಶ್ರೇಯಸ್ ಅಯ್ಯರ್ ಅವರನ್ನು ಪೆವಿಲಿಯನ್‌ಗೆ ಕರೆದೊಯ್ದ ನೆರವು ಸಿಬ್ಬಂದಿ
ನವದೆಹಲಿ: ಭಾರತ ಕ್ರಿಕೆಟ್ ತಂಡದ ಉಪನಾಯಕ ಶ್ರೇಯಸ್ ಅಯ್ಯರ್ ಅವರು ಶನಿವಾರ ನಡೆದ ಪಂದ್ಯದಲ್ಲಿ ಗಾಯಗೊಂಡಿದ್ದು ಮೂರು ವಾರಗಳವರೆಗೆ ವಿಶ್ರಾಂತಿ ಪಡೆಯಲಿದ್ದಾರೆ.
ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ಎದುರಿನ ಮೂರನೇ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಹರ್ಷಿತ್ ರಾಣಾ ಬೌಲಿಂಗ್‌ನಲ್ಲಿ ಅಲೆಕ್ಸ್ ಕ್ಯಾರಿ ಅವರ ಕ್ಯಾಚ್ ಪಡೆಯುವ ಸಂದರ್ಭದಲ್ಲಿ ಶ್ರೇಯಸ್ ಗಾಯಗೊಂಡರು. ಕ್ಯಾಚ್ ಪಡೆಯುವ ಪ್ರಯತ್ನದಲ್ಲಿ ಡೈವ್ ಮಾಡಿದಾಗ ಅವರ ಎಡಬದಿಯ ಪಕ್ಕೆಲುಬು ನೆಲಕ್ಕೆ ಉಜ್ಜಿದ್ದರಿಂದ ನೋವು ಅನುಭವಿಸಿದರು.
‘ಶ್ರೇಯಸ್ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದು ಸ್ಕ್ಯಾನ್ ಮಾಡಿಸಲಾಯಿತು. ಪ್ರಾಥಮಿಕ ತಪಾಸಣೆಯ ನಂತರ ಅವರ ಪಕ್ಕೆಲುಬಿನಲ್ಲಿ ಸೆಳೆತ ಇದ್ದು ಮೂರು ವಾರಗಳ ವಿಶ್ರಾಂತಿ ಪಡೆಯಬೇಕಿದೆ. ಅವರು ಭಾರತಕ್ಕೆ ಮರಳಿದ ಕೂಡಲೇ ಬೆಂಗಳೂರಿನ ಬಿಸಿಸಿಐ ಶ್ರೇಷ್ಠತಾ ಕೇಂದ್ರಕ್ಕೆ ವರದಿ ಮಾಡಿಕೊಳ್ಳಬೇಕು. ಅವರಿಗೆ ಚೇತರಿಸಿಕೊಳ್ಳಲು ಸಮಯ ಬೇಕು’ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.