
ಸೂರ್ಯಕುಮಾರ್ ಯಾದವ್–ಶ್ರೇಯಸ್ ಅಯ್ಯರ್
ಚಿತ್ರ: Deccan Herald
ಬೆಂಗಳೂರು: ಭಾರತ-ಆಸ್ಟ್ರೇಲಿಯಾ ನಡುವಿನ ಮೂರನೇ ಏಕದಿನ ಪಂದ್ಯದ ವೇಳೆ ಕ್ಷೇತ್ರ ರಕ್ಷಣೆ ಮಾಡುವಾಗ ಪಕ್ಕೆಲುಬು ಗಾಯಕ್ಕೆ ತುತ್ತಾಗಿ ಆಂತರಿಕ ರಕ್ತಸ್ರಾವದಿಂದ ಭಾರತ ಏಕದಿನ ತಂಡದ ಉಪನಾಯಕ ಶ್ರೇಯಸ್ ಅಯ್ಯರ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಶೀಘ್ರ ಗುಣಮುಖರಾಗಲೆಂದು ಟೀಂ ಇಂಡಿಯಾ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ತಾಯಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ಈ ಕುರಿತು ಸೂರ್ಯಕುಮಾರ್ ಯಾದವ್ ಸಹೋದರಿ ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊ ಒಂದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಸೂರ್ಯನ ತಾಯಿ ‘ಛತ್ ಪೂಜೆ’ಯ ಸಮಯದಲ್ಲಿ ಅಯ್ಯರ್ ಶೀಘ್ರ ಚೇತರಿಕೆಗಾಗಿ ಪ್ರಾರ್ಥಿಸುತ್ತಿರುವುದನ್ನು ಕಾಣಬಹುದು.
‘ಶ್ರೇಯಸ್ ಅವರು ಶೀಘ್ರದಲ್ಲಿ ಗುಣಮುಖರಾಗಿ ಬರಲಿ ಎಂದು ಎಲ್ಲರೂ ಪ್ರಾರ್ಥಿಸಬೇಕು ಎಂಬುದು ನನ್ನಿಚ್ಛೆ. ಅವರ ಆರೋಗ್ಯ ಉತ್ತಮವಾಗಿಲ್ಲ ಎಂಬ ಸುದ್ದಿ ನಿನ್ನೆ ತಿಳಿಯಿತು. ನಿಜಕ್ಕೂ ನನ್ನಲ್ಲಿ ಅದು ಬೇಸರ ಮೂಡಿಸಿದೆ’ ಎಂದು ಸೂರ್ಯಕುಮಾರ್ ಯಾದವ್ ತಾಯಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.