ಶುಭಮನ್ ಗಿಲ್ ಶತಕ ಸಾಧನೆ
ದೆಹಲಿ: ಇಲ್ಲಿನ ಅರುಣ್ ಜೇಟ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಎರಡನೇ ಟೆಸ್ಟ್‌ನಲ್ಲಿ ಟೀಂ ಇಂಡಿಯಾ ಬೃಹತ್ ಮೊತ್ತ ದಾಖಲಿಸಿ ಇನಿಂಗ್ಸ್ ಮುಂದುವರೆಸಿದೆ. 20 ರನ್ ಗಳಿಸಿ ಎರಡನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದ ನಾಯಕ ಶುಭಮನ್ ಗಿಲ್ ಎರಡನೇ ದಿನದಾಟದಲ್ಲಿ ಶತಕ ಸಿಡಿಸಿದ್ದಾರೆ. ಆ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಬರೆದಿದ್ದಾರೆ.
ನಾಯಕನಾಗಿ ಅಧಿಕಾರ ವಹಿಸಿಕೊಂಡ ಬಳಿಕ ಶುಭಮನ್ ಗಿಲ್ ಅವರ ಬ್ಯಾಟಿಂಗ್ ವೈಖರಿಯೇ ಬದಲಾಗಿದೆ. ಇಂಗ್ಲೆಂಡ್ ವಿರುದ್ಧ ಮುಕ್ತಾಯಗೊಂಡ ಸಚಿನ್ ತೆಂಡುಲ್ಕರ್–ಆ್ಯಂಡರ್ಸನ್ ಸರಣಿಯಲ್ಲಿ ಬ್ಯಾಕ್ ಟು ಬ್ಯಾಕ್ ಶತಕ ಸಿಡಿಸಿದ್ದ ಅವರು ಹಲವು ದಾಖಲೆ ಬರೆದಿದ್ದರು.
ಇದೀಗ ವೆಸ್ಟ್ ಇಂಡೀಸ್ ವಿರುದ್ಧವೂ ತಮ್ಮ ಅದ್ಭುತ ಫಾರ್ಮ್ ಅನ್ನು ಮುಂದುವರೆಸಿದ್ದಾರೆ. ಅವರು, ಕ್ಯಾಲೆಂಡರ್ ವರ್ಷವೊಂದರಲ್ಲಿ ನಾಯಕನಾಗಿ 5 ಶತಕಗಳನ್ನು ಸಿಡಿಸಿದ ಸಾಧನೆ ಮಾಡಿದ್ದಾರೆ. ಆ ಮೂಲಕ ವಿರಾಟ್ ಕೊಹ್ಲಿ ಬಳಿಕ ನಾಯಕನಾಗಿ ಕ್ಯಾಲೆಂಡರ್ ವರ್ಷವೊಂದರಲ್ಲಿ 5 ಶತಕ ಸಿಡಿಸಿದ ಭಾರತದ ಎರಡನೇ ನಾಯಕ ಎಂಬ ಸಾಧನೆ ಮಾಡಿದರು.
ವಿರಾಟ್ ಕೊಹ್ಲಿ ನಾಯಕನಾದ ಬಳಿಕ 2017 ಹಾಗೂ 2018ರಲ್ಲಿ 5 ಶತಕ ಸಿಡಿಸಿದ ಸಾಧನೆ ಮಾಡಿದ್ದರು. ಇದೀಗ ಇದೇ ವರ್ಷ ನಾಯಕತ್ವ ವಹಿಸಿಕೊಂಡ ಶುಭಮನ್ ಗಿಲ್ ಕೂಡ 5 ಶತಕ ಸಿಡಿಸಿದ ಸಾಧನೆ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.