

ಹರಾರೆ: ಜಿಂಬಾಬ್ವೆ ಟಿ20 ಕ್ರಿಕೆಟ್ ತಂಡದ ನಾಯಕ ಸಿಕಂದರ್ ರಾಜಾ ಅವರ ಸಹೋದರ ಮುಹಮ್ಮದ್ ಮಹದಿ ಅವರು ತೀವ್ರ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.
13 ವರ್ಷದ ಮುಹಮ್ಮದ್ ಮಹದಿ, ಹುಟ್ಟಿನಿಂದಲೇ ಹಿಮೋಫಿಲಿಯಾದಿಂದ ಬಳಲುತ್ತಿದ್ದರು. ಇತ್ತೀಚೆಗೆ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದರು. ಡಿ.29ರಂದು ಹರಾರೆಯಲ್ಲಿ ನಿಧನರಾಗಿದ್ದಾರೆ.
ಹರಾರೆಯಲ್ಲಿನ ವಾರೆನ್ ಹಿಲ್ ಸ್ಮಶಾನದಲ್ಲಿ ಅವರ ಅಂತ್ಯಕ್ರಿಯೆ ಮಾಡಲಾಗಿದೆ.
ಮುಹಮ್ಮದ್ ಮಹದಿ ನಿಧನಕ್ಕೆ ಜಿಂಬಾಬ್ವೆ ಕ್ರಿಕೆಟ್ ಮಂಡಳಿ ಸಂತಾಪ ಸೂಚಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದೆ.
ಐಸಿಸಿ ಟಿ20 ಅಲ್ರೌಂಡರ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಅನುಭವಿ ಆಟಗಾರ ರಾಜಾ, ಪ್ರಸ್ತುತ ಐಎಲ್‌ಟಿ 20 ಟೂರ್ನಿಯಲ್ಲಿ ಆಡುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.