
ಮುಲ್ಲನಪುರ: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ–20 ಸರಣಿಯ ಎರಡನೇ ಪಂದ್ಯದಲ್ಲಿ ತಿಲಕ್ ವರ್ಮಾ ದಾಖಲೆಯೊಂದನ್ನು ಮಾಡಿದ್ದಾರೆ.
ಮುಲ್ಲನಪುರದಲ್ಲಿ ನಡೆದ 2ನೇ ಪಂದ್ಯದಲ್ಲಿ ಭಾರತವು 51 ರನ್‌ಗಳ ಅಂತರದಲ್ಲಿ ಸೋಲನುಭವಿಸಿತ್ತು.
214 ರನ್‌ಗಳ ಬೃಹತ್ ಮೊತ್ತ ಬೆನ್ನತ್ತಿದ ಭಾರತವು, ಆರಂಭಿಕ ವಿಕೆಟ್‌ಗಳನ್ನು ಬೇಗನೆ ಕಳೆದುಕೊಂಡಿತು. 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದ ತಿಲಕ್ ವರ್ಮಾ 34 ಎಸೆತಗಳಲ್ಲಿ 62 ರನ್ ಗಳಿಸಿದರು. ಅವರ ಇನಿಂಗ್ಸ್‌ನಲ್ಲಿ 2 ಬೌಂಡರಿ ಹಾಗೂ 5 ಸಿಕ್ಸರ್‌ಗಳಿದ್ದವು.
ಸರಣಿಯ 2ನೇ ಪಂದ್ಯದಲ್ಲಿ 5 ಸಿಕ್ಸರ್ ಸಿಡಿಸುವ ಮೂಲಕ, ದಕ್ಷಿಣ ಆಫ್ರಿಕಾ ವಿರುದ್ಧ ಟಿ–20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಆಟಗಾರ ಎನ್ನುವ ಖ್ಯಾತಿಗೆ ಪಾತ್ರರಾದರು.
ಚುಟುಕು ಮಾದರಿಯ ಕ್ರಿಕೆಟ್‌ನಲ್ಲಿ ಹರಿಣಗಳ ವಿರುದ್ಧ ತಿಲಕ್ ವರ್ಮಾ ಅವರು 26 ಸಿಕ್ಸರ್ ಬಾರಿಸಿದ್ದಾರೆ. ಈ ಮೂಲಕ 25 ಸಿಕ್ಸರ್ ಸಿಡಿಸಿದ್ದ ನಾಯಕ ಸೂರ್ಯಕುಮಾರ್ ಯಾದವ್ ಅವರ ದಾಖಲೆಯನ್ನು ಮುರಿದರು.
ಸಂಜು ಸ್ಯಾಮ್ಸನ್ (19 ಸಿಕ್ಸರ್), ರೋಹಿತ್ ಶರ್ಮಾ (16 ಸಿಕ್ಸರ್), ಸುರೇಶ್ ರೈನಾ (13 ಸಿಕ್ಸರ್) ಹಾಗೂ ಹಾರ್ದಿಕ್ ಪಾಂಡ್ಯ (13 ಸಿಕ್ಸರ್) ನಂತದ ಸ್ಥಾನದಲ್ಲಿದ್ದಾರೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5 ಪಂದ್ಯಗಳ ಟಿ–20 ಸರಣಿಯು 1–1ರಲ್ಲಿ ಸಮಬಲವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.