ADVERTISEMENT

ಸ್ಲೋ ಓವರ್ ರೇಟ್: ಆಸಿಸ್ ಮಹಿಳಾ ತಂಡಕ್ಕೆ ಪಂದ್ಯ ಶುಲ್ಕದ ಶೇ 10ರಷ್ಟು ದಂಡ

ಪಿಟಿಐ
Published 19 ಸೆಪ್ಟೆಂಬರ್ 2025, 9:27 IST
Last Updated 19 ಸೆಪ್ಟೆಂಬರ್ 2025, 9:27 IST
<div class="paragraphs"><p>ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್‌ ತಂಡ</p></div>

ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್‌ ತಂಡ

   

ನವದೆಹಲಿ: ಭಾರತ ಹಾಗೂ ಆಸ್ಟ್ರೇಲಿಯಾ ಮಹಿಳಾ ತಂಡಗಳ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯುತ್ತಿದ್ದು, ಈಗಾಗಲೇ ಎರಡು ಪಂದ್ಯಗಳು ಮುಕ್ತಾಯಗೊಂಡಿವೆ. ಉಭಯ ತಂಡಗಳು ತಲಾ ಒಂದೊಂದು ಪಂದ್ಯ ಗೆದ್ದು ಸರಣಿಯಲ್ಲಿ ಸಮಬಲ ಸಾಧಿಸಿವೆ. ಮೂರನೇ ಪಂದ್ಯವನ್ನು ಗೆಲ್ಲುವ ತಂಡ ಸರಣಿ ಗೆಲ್ಲಲಿದೆ. ಈ ನಡುವೆ ನಿಧಾನ ಗತಿಯಲ್ಲಿ ಓವರ್ ಮಾಡಿದ್ದಕ್ಕಾಗಿ ಆಸ್ಟ್ರೇಲಿಯಾ ತಂಡಕ್ಕೆ ದಂಡ ವಿಧಿಸಲಾಗಿದೆ.

ಮೂರು ಪಂದ್ಯಗಳ ಸರಣಿಯ ಎರಡನೇ ಪಂದ್ಯ ಮುಲ್ಲನ್‌ಪುರದಲ್ಲಿ ನಡೆದಿದ್ದು, ಈ ಪಂದ್ಯದಲ್ಲಿ ಭಾರತ ಮಹಿಳಾ ತಂಡ 102 ರನ್‌ಗಳ ಬೃಹತ್ ಅಂತರದ ಗೆಲುವು ಸಾಧಿಸಿದೆ. ಸೋಲಿನ ನಡುವೆ ಆಸ್ಟ್ರೇಲಿಯಾ ತಂಡಕ್ಕೆ ನಿಧಾನಗತಿಯ ಓವರ್‌ ರೇಟ್‌ ಮಾಡಿದ್ದಕ್ಕಾಗಿ ಮಹಿಳಾ ತಂಡಕ್ಕೆ ಪಂದ್ಯ ಶುಲ್ಕದ ಶೇ 10ರಷ್ಟು ದಂಡ ವಿಧಿಸಿದೆ.

ADVERTISEMENT

ಆಸ್ಟ್ರೇಲಿಯಾ ತನಗೆ ನಿಗದಿಪಡಿಸಿದ ಸಮಯದಲ್ಲಿ ಎರಡು ಓವರ್‌ ಕಡಿಮೆ ಬೌಲಿಂಗ್ ಮಾಡಿದ ಕಾರಣಕ್ಕೆ ಐಸಿಸಿ ಅಂತರರಾಷ್ಟ್ರೀಯ ಅಂಪೈರ್‌ಗಳ ಸಮಿತಿಯ ಜಿ.ಎಸ್.ಲಕ್ಷ್ಮಿ ದಂಡ ವಿಧಿಸಿ ಆದೇಶಿಸಿದ್ದಾರೆ.

ಈ ಕುರಿತು ಐಸಿಸಿ ಹೇಳಿಕೆ ಬಿಡುಗಡೆ ಮಾಡಿದ್ದು, ‘ಆಟಗಾರರು ಮತ್ತು ಆಟಗಾರರ ಸಹಾಯಕ ಸಿಬ್ಬಂದಿಯ ನೀತಿ ಸಂಹಿತೆ ಆರ್ಟಿಕಲ್ 2.22 ರ ಪ್ರಕಾರ, ನಿಧಾನಗತಿಯ ಓವರ್ ರೇಟ್ ಅಪರಾಧಗಳಿಗೆ ಸಂಬಂಧಿಸಿದಂತೆ ಆಟಗಾರರು ನಿಗದಿತ ಸಮಯದಲ್ಲಿ ಬೌಲ್ ಮಾಡಲು ವಿಫಲವಾದರೆ ಪ್ರತಿ ಓವರ್‌ಗೆ ಪಂದ್ಯ ಶುಲ್ಕದ ಶೇ 5 ರಷ್ಟು ದಂಡ ವಿಧಿಸಲಾಗುತ್ತದೆ ಎಂದು ತಿಳಿಸಿದೆ.

ಆಸ್ಟ್ರೇಲಿಯಾ ಮಹಿಳಾ ತಂಡದ ನಾಯಕಿ ಅಲಿಸಾ ಹೀಲಿ ತಮ್ಮ ತಪ್ಪನ್ನು ಒಪ್ಪಿಕೊಂಡಿರುವುದರಿಂದ ಹೆಚ್ಚಿನ ವಿಚಾರಣೆಯ ಅಗತ್ಯವಿಲ್ಲ ಎಂದು ಐಸಿಸಿ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.