
ಸ್ಮೃತಿ ಮಂದಾನ
(ಪಿಟಿಐ ಚಿತ್ರ)
ದೆಹಲಿ: ಸಂಗೀತ ನಿರ್ದೇಶಕ ಪಲಾಶ್ ಮುಚ್ಛಲ್ ಜೊತೆಗಿನ ವಿವಾಹ ರದ್ದಾದ ಬಳಿಕ ಭಾರತ ಮಹಿಳಾ ಕ್ರಿಕೆಟ್ ತಂಡದ ತಾರೆ ಸ್ಮೃತಿ ಮಂದಾನ ಮೊದಲ ಬಾರಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ.
ದೆಹಲಿಯ ಭಾರತ ಮಂಟಪದಲ್ಲಿ ನಡೆದ ಅಮೇಜಾನ್ ಕಾರ್ಯಕ್ರಮದಲ್ಲಿ ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರೊಂದಿಗೆ ಸ್ಮೃತಿ ಭಾಗವಹಿಸಿದ್ದಾರೆ.
'ಈ ಸಂದರ್ಭದಲ್ಲಿ ಕ್ರಿಕೆಟ್‌ನಿಂದ ಮಿಗಿಲಾಗಿ ಏನು ಇಲ್ಲ. ಕ್ರಿಕೆಟ್‌ಗಿಂತ ಹೆಚ್ಚಾಗಿ ಯಾವುದನ್ನು ಪ್ರೀತಿಸುವುದಿಲ್ಲ. ದೇಶಕ್ಕಾಗಿ ಜೆರ್ಸಿ ಧರಿಸಿ ಆಡುವುದು ನನಗೆ ಅತಿ ದೊಡ್ಡ ಪ್ರೇರಣೆಯಾಗಿದೆ' ಎಂದು ಹೇಳಿದ್ದಾರೆ.
'ಈ ಒಂದು ವಿಚಾರವು ಜೀವನದಲ್ಲಿ ಎದುರಾಗುವ ಎಲ್ಲ ಸಮಸ್ಯೆಗಳನ್ನು ಮೆಟ್ಟಿ ನಿಲ್ಲಲು ನೆರವಾಗಿದೆ' ಎಂದು ಅವರು ತಿಳಿಸಿದ್ದಾರೆ.
'ಬ್ಯಾಟಿಂಗ್ ಮಾಡುವ ಅಭಿಲಾಷೆ ಈಗಲೂ ಇದೆ. ಹಾಗಾಗಿ ಬ್ಯಾಟಿಂಗ್ ಮಾಡಲು ಹೋದಾಗ ಮನಸ್ಸಿನಲ್ಲಿ ಬೇರೆ ಯಾವುದೇ ಆಲೋಚನೆಗಳು ಇರುತ್ತವೆ ಎಂದು ನಾನು ಭಾವಿಸುವುದಿಲ್ಲ. ದೇಶಕ್ಕಾಗಿ ಪಂದ್ಯ ಗೆಲ್ಲುವುದೇ ನನ್ನ ಗುರಿಯಾಗಿದೆ' ಎಂದು ಹೇಳಿದ್ದಾರೆ.
ಸ್ಮೃತಿ ಮಂದಾನ ಹಾಗೂ ಪಲಾಶ್ ನಡುವಣ ವಿವಾಹ ನವೆಂಬರ್ 23ರಂದು ನಿಗದಿಯಾಗಿತ್ತು. ಆದರೆ ಮಂದಾನ ಅವರ ತಂದೆ ಶ್ರೀನಿವಾಸ್ ಅವರಿಗೆ ಹೃದಯಬೇನೆ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದರಿಂದ ವಿವಾಹ ರದ್ದಾಗಿತ್ತು ಎಂದು ಹೇಳಲಾಗಿತ್ತು.
ಬಳಿಕ ಸಾಮಾಜಿಕ ಜಾಲತಾಣವೊಂದರ ಪೋಸ್ಟ್ ಹರಿದಾಡಿದ ಬೆನ್ನಲ್ಲೇ ಇವರಿಬ್ಬರ ನಡುವಣ ಸಂಬಂಧ ಬಗ್ಗೆ ವದಂತಿಗಳು ಹರಿದಾಡಿದ್ದವು.
'ಡಿಸೆಂಬರ್ 7ರಂದು ವಿವಾಹ ರದ್ದಾಗಿದೆ. ಈ ವಿಷಯವನ್ನು ಇಲ್ಲಿಗೇ ಕೊನೆಗೊಳಿಸುತ್ತಿದ್ದೇನೆ' ಎಂದು ಸ್ಮೃತಿ ಸ್ಪಷ್ಟನೆ ನೀಡಿದ್ದರು.
ಏತನ್ಮಧ್ಯೆ ಶ್ರೀಲಂಕಾ ವಿರುದ್ಧ ಏಕದಿನ ಸರಣಿಗೆ ಸ್ಮೃತಿ ಮಂದಾನ ಉಪನಾಯಕಿಯಾಗಿದ್ದಾರೆ. ಐದು ಪಂದ್ಯಗಳ ಟಿ20 ಸರಣಿಯು ಡಿಸೆಂಬರ್ 21ರಂದು ಆರಂಭವಾಗಲಿದೆ.
ಹರ್ಮನ್‌ಪ್ರೀತ್ ಕೌರ್, ಸ್ಮೃತಿ ಮಂದಾನ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.