
ಮಂದಾನ ಹಳದಿ ಶಾಸ್ತ್ರ
ಚಿತ್ರ: ಎಕ್ಸ್
ಭಾರತ ಮಹಿಳಾ ಕ್ರಿಕೆಟ್ ತಂಡದ ತಾರಾ ಆಟಗಾರ್ತಿ ಸ್ಮೃತಿ ಮಂದಾನ ಅವರು ವಿವಾಹ ಸಂಭ್ರಮದಲ್ಲಿದ್ದಾರೆ. ಅವರು ತಾವು ನಿಶ್ಚಿತಾರ್ಥ ಮಾಡಿಕೊಂಡಿರುವುದನ್ನು ಶುಕ್ರವಾರಂದು ಖಚಿತಪಡಿಸಿದ್ದಾರೆ. ವಿವಾಹ ಪೂರ್ವ ಹಳದಿ ಶಾಸ್ತ್ರದಲ್ಲಿ ಮಂದಾನ ಅವರ ಸಹ ಆಟಗಾರ್ತಿಯರು ಭಾಗಿಯಾಗಿ ಭರ್ಜರಿ ನೃತ್ಯ ಮಾಡಿದ್ದಾರೆ.
ಇತ್ತೀಚೆಗೆ ಮುಕ್ತಾಗೊಂಡ ಮಹಿಳಾ ಏಕದಿನ ವಿಶ್ವಕಪ್ ಗೆದ್ದ ತಂಡದ ಭಾಗವಾಗಿದ್ದ ಮಂದಾನ ಅವರು ಹಸೆಮಣೆ ಏರಲು ಸಜ್ಜಾಗಿದ್ದಾರೆ. ಅವರು ಗಾಯಕ ಪಲಾಶ್ ಮುಚ್ಚಲ್ ಅವರೊಂದಿಗೆ ವಿವಾಹವಾಗಲಿದ್ದಾರೆ. ಈಗಾಗಲೇ ಮದುವೆ ಪೂರ್ವ ಕಾರ್ಯಕ್ರಮಗಳು ಆರಂಭವಾಗಿದ್ದು, ನಿನ್ನೆ (ಶುಕ್ರವಾರ) ನಡೆದ ಹಳದಿ ಶಾಸ್ತ್ರದಲ್ಲಿ ಅನೇಕ ಸಹ ಆಟಗಾರ್ತಿಯರು ಭಾಗವಹಿಸಿದ್ದಾರೆ.
ಭಾರತ ಮಹಿಳಾ ತಂಡದ ಆಟಗಾರ್ತಿಯರಾದ ಶೆಫಾಲಿ ವರ್ಮಾ, ರಿಚಾ ಘೋಷ್, ಶ್ರೇಯಾಂಕ ಪಾಟೀಲ್, ರೇಣುಕಾ ಸಿಂಗ್, ಶಿವಾಲಿ ಶಿಂಧೆ, ರಾಧಾ ಯಾದವ್ ಮತ್ತು ಜೆಮಿಮಾ ರಾಡ್ರಿಗಸ್ ಹಳದಿ ಶಾಸ್ತ್ರದಲ್ಲಿ ಭಾಗಿಯಾಗಿ ನೃತ್ಯ ಮಾಡಿದ್ದಾರೆ.
ಸದ್ಯ, ಮಂದಾನ ಹಾಗೂ ಮುಚ್ಚಲ್ ಹಳದಿ ಕಾರ್ಯಕ್ರಮದಲ್ಲಿ ಮಹಿಳಾ ಆಟಗಾರ್ತಿಯರ ಡ್ಯಾನ್ಸ್ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಸಿಕ್ಕಾಪಟ್ಟೆ ಹರಿದಾಡುತ್ತಿದೆ. ಮಂದಾನ ಅಭಿಮಾನಿಗಳು ಈ ವಿಡಿಯೋಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ಗಾಯಕ ಪಲಾಶ್ ಮುಚ್ಚಲ್ ಹಾಗೂ ಸ್ಮೃತಿ ಮಂದಾನ ವಿವಾಹ ಕಾರ್ಯಕ್ರಮ ನವೆಂಬರ್ 23ರಂದು ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.