
ನವದೆಹಲಿ: ಐಸಿಸಿ ಮಹಿಳಾ ವಿಶ್ವಕಪ್ ವಿಜೇತ ಭಾರತ ತಂಡದ ಆಟಗಾರ್ತಿ ಸ್ಮೃತಿ ಮಂದಾನ ಅವರು ಬಿಬಿಸಿ ನೀಡುವ 2025ನೇ ಸಾಲಿನ ‘ಭಾರತೀಯ ಮಹಿಳಾ ಕ್ರೀಡಾಪಟು’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಫಿಡೆ ಮಹಿಳಾ ಚೆಸ್ ವಿಶ್ವಕಪ್ ವಿಜೇತ ದಿವ್ಯಾ ದೇಶಮುಖ್ ಅವರು ವರ್ಷದ ಉದಯೋನ್ಮುಖ ಆಟಗಾರ್ತಿ ಗೌರವಕ್ಕೆ ಭಾಜನರಾಗಿದ್ದಾರೆ.
2024ರ ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಎರಡು ಕಂಚಿನ ಪದಕ ಜಯಿಸಿದ್ದ ಪ್ರೀತಿ ಪಾಲ್ ಅವರು ಪ್ಯಾರಾ ಮಹಿಳಾ ಅಥ್ಲೀಟ್ ಪ್ರಶಸ್ತಿ ಪಡೆದಿದ್ದಾರೆ. ಒಲಿಂಪಿಕ್ಸ್ ಶೂಟಿಂಗ್‌ನಲ್ಲಿ ಫೈನಲ್ ತಲುಪಿದ್ದ ಭಾರತದ ಮೊದಲ ಮಹಿಳಾ ಶೂಟರ್ ಅಂಜಲಿ ಭಾಗವತ್ ಅವರು ಜೀವಮಾನ ಸಾಧನೆ ಗೌರವಕ್ಕೆ ಪಾತ್ರರಾಗಿದ್ದಾರೆ.
ದಿಗ್ಗಜ ಟೆನಿಸ್ ಆಟಗಾರ ಲಿಯಾಂಡರ್ ಪೇಸ್, ಪ್ಯಾರಾಲಿಂಪಿಕ್ ಪದಕ ವಿಜೇತೆ ದೀಪಾ ಮಲಿಕ್ ಹಾಗೂ ಭಾರತ ಅಥ್ಲೆಟಿಕ್ ಫೆಡರೇಶನ್‌ನ ಹಿರಿಯ ಉಪಾಧ್ಯಕ್ಷೆ ಅಂಜು ಬಾಬಿ ಜಾರ್ಜ್ ಅವರನ್ನೊಳಗೊಂಡ ತೀರ್ಪುಗಾರರ ಸಮಿತಿ ವಿಜೇತರನ್ನು ಆಯ್ಕೆ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.