
ವಿಶಾಖಪಟ್ಟಣ: ಶ್ರೀಲಂಕಾ ಮಹಿಳಾ ತಂಡದ ವಿರುದ್ಧ ಇಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ತಂಡ 8 ವಿಕೆಟ್‌ಗಳ ಅಂತರದಲ್ಲಿ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ 5 ಪಂದ್ಯಗಳ ಟಿ20 ಸರಣಿಯಲ್ಲಿ 1–0 ಮುನ್ನಡೆ ಪಡೆದುಕೊಂಡಿದೆ.
ಈ ಪಂದ್ಯದಲ್ಲಿ 25 ರನ್ ಕಲೆಹಾಕಿದ ಭಾರತ ತಂಡದ ಉಪನಾಯಕಿ ಸ್ಮೃತಿ ಮಂದಾನ ಅವರು ವಿಶೇಷ ಮೈಲುಗಲ್ಲು ತಲುಪಿದರು. ಮಾತ್ರವಲ್ಲ, ಅಂತರರಾಷ್ಟ್ರೀಯ ಮಹಿಳಾ ಕ್ರಿಕೆಟ್‌ನಲ್ಲಿ ಈ ದಾಖಲೆ ಬರೆದ ವಿಶ್ವದ 2ನೇ ಮಹಿಳಾ ಬ್ಯಾಟರ್ ಎನಿಸಿಕೊಂಡಿದ್ದಾರೆ.
ವಿಶಾಖಪಟ್ಟಣದಲ್ಲಿ ನಡೆದ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದ ಸ್ಮೃತಿ ಮಂದಾನ 25 ರನ್ ಬಾರಿಸಿ ವಿಕೆಟ್ ಔಟ್ ಆದರು. ಆ ಮೂಲಕ ಟಿ20 ಅಂತರರಾಷ್ಷ್ರೀಯ ಕ್ರಿಕೆಟ್‌ನಲ್ಲಿ 4 ಸಾವಿರ ರನ್ ಪೂರೈಸಿದ ಸಾಧನೆ ಮಾಡಿದರು. ಇದಕ್ಕೂ ಮೊದಲು ನ್ಯೂಜಿಲೆಂಡ್ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಸೂಜಿ ಬೇಟ್ಸ್ ಮಾತ್ರ ಈ ಸಾಧನೆ ಮಾಡಿದ್ದರು.
4,000 ರನ್ ಗಳಿಸಿದ ಮೊದಲ ಆಟಗಾರ್ತಿ
ಭಾನುವಾರ ನಡೆದ ಪಂದ್ಯದಲ್ಲಿ 25 ರನ್ ಗಳಿಸುವ ಮೂಲಕ 4 ಸಾವಿರ ರನ್ ಕಲೆಹಾಕಿದ ಸ್ಮೃತಿ ಮಂದಾನ, ಅಂತರರಾಷ್ಟ್ರೀಯ ಮಹಿಳಾ ಟಿ20 ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತದ ಬ್ಯಾಟರ್ ಎಂಬ ಸಾಧನೆ ಮಾಡಿದರು. ಒಟ್ಟಾರೆಯಾಗಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಬಳಿಕ ಈ ಸಾಧನೆ ಮಾಡಿದ ಭಾರತದ ಮೂರನೇ ಕ್ರಿಕೆಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾದರು.
ಮಹಿಳಾ ಟಿ20 ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿಯರು
ಸುಜಿ ಬೇಟ್ಸ್ (ನ್ಯೂಜಿಲೆಂಡ್)- 4716 ರನ್
ಸ್ಮೃತಿ ಮಂದಾನ (ಭಾರತ)- 4006 ರನ್
ಹರ್ಮನ್‌ಪ್ರೀತ್ ಕೌರ್ (ಭಾರತ)- 3654 ರನ್
ಚಾಮರಿ ಅಟ್ಟಪಟ್ಟು (ಶ್ರೀಲಂಕಾ)- 3473 ರನ್
ಸೋಫಿ ಡಿವೈನ್ (ನ್ಯೂಜಿಲೆಂಡ್)- 3431 ರನ್
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.