

ಸ್ಮೃತಿ ಮಂದಾನ ಹಾಗೂ ಪಲಾಶ್ ಮುಚ್ಚಲ್
(ಚಿತ್ರ ಕೃಪೆ ಎಕ್ಸ್)
ಭಾರತದ ಕ್ರಿಕೆಟ್ ತಾರೆ ಸ್ಮೃತಿ ಮಂದಾನ ಮದುವೆ ಸಂಭ್ರಮದಲ್ಲಿದ್ದಾರೆ. ಸಂಗೀತ ನಿರ್ದೇಶಕ ಪಲಾಶ್ ಮುಚ್ಚಲ್ ಜೊತೆಗೆ ಇಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.
ಕಳೆದ ಕೆಲ ದಿನಗಳಿಂದ ಅವರ ವಿವಾಹ ಪೂರ್ವ ಕಾರ್ಯಕ್ರಮಗಳು ನಡೆಯುತ್ತಿವೆ. ಶನಿವಾರ ರಾತ್ರಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಸ್ಮೃತಿ ಹಾಗೂ ಪಲಾಶ್ ಡ್ಯಾನ್ಸ್ ಮಾಡಿರುವ ವಿಡಿಯೊ ಗಮನ ಸೆಳೆಯುತ್ತಿದೆ.
ಸಂಗೀತ ಕಾರ್ಯಕ್ರಮದಲ್ಲಿ ಶ್ರೇಯಾಂಕಾ ಪಾಟೀಲ್ ಸೇರಿದಂತೆ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿಯರು ಸಹ ಹೆಜ್ಜೆ ಹಾಕಿದ್ದಾರೆ. ಆ ವಿಡಿಯೊಗಳ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.