ADVERTISEMENT

ಚೆನ್ನೈ ತಂಡದಲ್ಲಿರುವುದೆಂದರೆ ಸರ್ಕಾರಿ ನೌಕರಿ: ಸೆಹ್ವಾಗ್ ವ್ಯಂಗ್ಯ

ಪಿಟಿಐ
Published 9 ಅಕ್ಟೋಬರ್ 2020, 16:17 IST
Last Updated 9 ಅಕ್ಟೋಬರ್ 2020, 16:17 IST
ವೀರೇಂದ್ರ ಸೆಹ್ವಾಗ್
ವೀರೇಂದ್ರ ಸೆಹ್ವಾಗ್   

ನವದೆಹಲಿ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಕೆಲವು ಬ್ಯಾಟ್ಸ್‌ಮನ್‌ಗಳು ತಮ್ಮದು ’ಸರ್ಕಾರಿ ನೌಕರಿ’ ಅಂದುಕೊಂಡಿದ್ದಾರೆ ಎಂದು ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ವ್ಯಂಗ್ಯ ಮಾಡಿದ್ದಾರೆ.

ಕೋಲ್ಕತ್ತ ನೈಟ್ ರೈಡರ್ಸ್ ಎದುರಿನ ಪಂದ್ಯದಲ್ಲಿ 168 ರನ್‌ಗಳ ಗೆಲುವಿನ ಗುರಿಯನ್ನು ಮುಟ್ಟುವಲ್ಲಿ ವಿಫಲವಾಗಿದ್ದ ಚೆನ್ನೈ ತಂಡದ ಕೆಲವು ಬ್ಯಾಟ್ಸ್‌ಮನ್‌ಗಳ ಮೇಲೆ ವೀರೂ ಚಾಟಿ ಬೀಸಿದ್ದಾರೆ.

‘ಸುಲಭವಾಗಿ ಜಯಿಸಬೇಕಾದ ಗುರಿ ಅದಾಗಿತ್ತು. ಆದರೆ ಕೇದಾರ್ ಜಾಧವ್ ಹೆಚ್ಚು ಡಾಟ್ ಬಾಲ್ ಆಡಿದ್ದರು. ಆದ್ದರಿಂದ ರವೀಂದ್ರ ಜಡೇಜಾಗೆ ಹೆಚ್ಚು ಅವಕಾಶ ಸಿಗಲಿಲ್ಲ’ ಎಂದು ಸೆಹ್ವಾಗ್ ಇಂಗ್ಲಿಷ್ ವೆಬ್‌ಸೈಟ್‌ಗೆ ನೀಡಿರುವ ಸಂದರ್ಶನದಲ್ಲಿ ಹೇಳಿದ್ದಾರೆ. ಆ ಪಂದ್ಯದಲ್ಲಿ ಕೇದಾರ್ 12 ಎಸೆತಗಳಲ್ಲಿ ಏಳು ರನ್ ಗಳಿಸಿದ್ದರು.

ADVERTISEMENT

‘ಸಿಎಸ್‌ಕೆಯಲ್ಲಿರುವುದು ಸರ್ಕಾರಿ ನೌಕರಿ ಎಂದು ಕೆಲವರು ಭಾವಿಸಿದಂತಿದೆ. ಚೆನ್ನಾಗಿ ಆಡಲಿ ಬಿಡಲಿ ವೇತನವಂತೂ ಸಿಗುತ್ತದೆ ಎಂಬ ಭಾವನೆಯಲ್ಲಿದ್ದಾರೆ’ ಎಂದು ಸೆಹ್ವಾಗ್ ಹೇಳಿದ್ದಾರೆ.

ಹೋದ ವಾರ ಸನ್‌ರೈಸರ್ಸ್ ಹೈದರಾಬಾದ್ ಎದುರಿನ ಪಂದ್ಯದಲ್ಲಿಯೂ ಚೆನ್ನೈ ಬ್ಯಾಟಿಂಗ್ ವೈಫಲ್ಯ ಅನುಭವಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.