ADVERTISEMENT

ಭಾರತ ಕ್ರಿಕೆಟ್ ತಂಡದ ಕೆಲವು ಆಟಗಾರರು, ಸಹಾಯಕ ಸಿಬ್ಬಂದಿಗೆ ಕೋವಿಡ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 2 ಫೆಬ್ರುವರಿ 2022, 16:56 IST
Last Updated 2 ಫೆಬ್ರುವರಿ 2022, 16:56 IST
   

ನವದೆಹಲಿ:ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿ ಕೆಲವೇ ದಿನಗಳಲ್ಲಿ ಆರಂಭವಾಗಲಿದ್ದು, ಈ ಮಧ್ಯೆ ಭಾರತೀಯ ಪುರುಷರ ಕ್ರಿಕೆಟ್ ತಂಡದ ಕೆಲವು ಆಟಗಾರರು ಮತ್ತು ಸಹಾಯಕ ಸಿಬ್ಬಂದಿಯಲ್ಲಿ ಕೋವಿಡ್ ದೃಢಪಟ್ಟಿದೆ ಎಂದು ಬಿಸಿಸಿಐ ಖಜಾಂಚಿ ಅರುಣ್ ಕುಮಾರ್ ಧುಮಾಲ್ ತಿಳಿಸಿದ್ದಾರೆ ಎಂದು ಎಎನ್‌ಐ ಟ್ವೀಟ್ ಮಾಡಿದೆ.

ಬಿಸಿಸಿಐ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಧುಮಾಲ್ ಹೇಳಿದ್ದಾರೆ.

ಫೆ.6ರಿಂದ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ. ಬಳಿಕ ಕೋಲ್ಕತ್ತದ ಈಡನ್ ಗಾರ್ಡನ್ಸ್‌ನಲ್ಲಿ ಮೂರು ಪಂದ್ಯಗಳ ಟಿ–20 ಸರಣಿ ನಡೆಯಲಿದೆ.

ADVERTISEMENT

ಬಾರ್ಬಡೋಸ್‌ನಿಂದ ಒಂದೆರಡು ದಿನಗಳ ಪ್ರಯಾಣದ ಬಳಿಕ ವೆಸ್ಟ್‌ ಇಂಡೀಸ್‌ ತಂಡ ಭಾರತಕ್ಕೆ ಬಂದಿಳಿದಿದೆ.

ಕೋವಿಡ್‌ ಹಿನ್ನೆಲೆಯಲ್ಲಿ ಏಕದಿನ ಸರಣಿಯನ್ನು ಕ್ರೀಡಾಂಗಣದಲ್ಲಿ ವೀಕ್ಷಿಸಲು ಪ್ರೇಕ್ಷಕರಿಗೆ ಅವಕಾಶ ನೀಡಿಲ್ಲ. ಆದರೆ, ಟಿ–20 ಸರಣಿ ವೀಕ್ಷಿಸಲು ಪ್ರೇಕ್ಷಕರಿಗೆ ಪಶ್ಚಿಮ ಬಂಗಾಳ ಸರ್ಕಾರ ಅನುಮತಿ ನೀಡಿದೆ.

ಫೆ. 6, 9 ಮತ್ತು 11 ರಂದು ಏಕದಿನ ಸರಣಿ ನಡೆಯಲಿದೆ. ಫೆ. 16, 18 ಮತ್ತು 20 ರಂದು ಟಿ–20 ಸರಣಿ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.